ನವ ದೆಹಲಿ : ದೆಹಲಿ ಬಿಜ್ವಾಸನ್ ನಗರದಲ್ಲಿರುವ ಕೊಳಗೇರಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಆರು ಮಂದಿ ದಹನವಾಗಿರುವ ಘಟನೆ ನಡೆದಿದೆ.
ಟ್ರಾನ್ಸ್ ಫಾರ್ಮರ್ ಬಳಿಯ ಎರಡು ಕೊಳಗೇರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಕೊಳಗೇರಿ ಪ್ರದೇಶ ಸುಟ್ಟು ಹೋಗಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಅಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ. ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಅಗ್ನಿ ಅವಘಡಕ್ಕೆ ಸಿಲಿಂಡರ್ ಬ್ಲಾಸ್ಟ್ ಆಗಿರುವುದು ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ತಿಳುದುಬರಬೇಕಿದೆ.
ನಿಮ್ಮ ಕಾಮೆಂಟ್ ಬರೆಯಿರಿ