15% ಕ್ಕಿಂತ ಹೆಚ್ಚು ಕೋವಿಡ್‌ ಸಕಾರಾತ್ಮಕ ದರ ಹೊಂದಿರುವ 150 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಸಾಧ್ಯತೆ:ವರದಿ

ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸುಮಾರು 150 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್‌ಡೌನ್ ವಿಧಿಸಲು ಪ್ರಸ್ತಾಪಿಸಿದೆ. ಈ ಜಿಲ್ಲೆಗಳಲ್ಲಿ ಕೋವಿಡ್‌-19 ಸಕಾರಾತ್ಮಕ ದರವು 15% ಕ್ಕಿಂತ ಹೆಚ್ಚಿದೆ ಎಂದು TOI ವರದಿ ತಿಳಿಸಿದೆ.
ಸಾಂಕ್ರಾಮಿಕ ರೋಗದಿಂದಾಗಿ ಒತ್ತಡಕ್ಕೆ ಸಿಲುಕಿರುವ ಈ ಪ್ರದೇಶಗಳಲ್ಲಿನ ಆರೋಗ್ಯ ವ್ಯವಸ್ಥೆಗಳನ್ನು ಗಮನದಲ್ಲಿಟ್ಟುಕೊಂಡು ಶಿಫಾರಸು ಮಾಡಲಾದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ವರದಿ ಹೇಳಿದೆ.
ಮುಂದಿನ ಕೆಲವು ವಾರಗಳಲ್ಲಿ ಪ್ರಸರಣ ಸರಪಳಿ ಮುರಿಯಲು ಹೆಚ್ಚಿನ ಸಕಾರಾತ್ಮಕ ದರ ಹೊಂದಿರುವ ಜಿಲ್ಲೆಗಳಲ್ಲಿ ಕಠಿಣ ಲಾಕ್‌ಡೌನ್ ಕ್ರಮಗಳು ಅತ್ಯಗತ್ಯ ಎಂದು ನಮ್ಮ ವಿಶ್ಲೇಷಣೆ ಸೂಚಿಸುತ್ತದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿ ಹೇಳಿದೆ.
2021 ರ ಏಪ್ರಿಲ್ 28 ರ ಬುಧವಾರ ಭಾರತವು ಕಳೆದ 24 ಗಂಟೆಗಳಲ್ಲಿ 3,60,960 ಹೊಸ ಕೋವಿಡ್‌ 19 ಸೋಂಕುಗಳು, 3293 ಸಾವುಗಳು ಮತ್ತು 2,61,162 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರಮುಖ ಸುದ್ದಿ :-   ರೈಲು ನಿಲ್ದಾಣದಲ್ಲಿ ವ್ಯಕ್ತಿಯ ಸಾವಿನ ರಹಸ್ಯ ಭೇದಿಸಿದ ರೈಲು ಪ್ರಯಾಣಿಕನ ಮೊಬೈಲ್‌ ಸೆಲ್ಫಿ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement