ಕರ್ನಾಟಕದಲ್ಲಿ 35 ಸಾವಿರಕ್ಕೂ ಹೆಚ್ಚು ದೈನಂದಿನ ಸೋಂಕು, 270 ಸಾವು

ಬೆಂಗಳೂರು: ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 35,024 ಜನರಿಗೆ ಕೊರೊನಾ ದೃಢವಾಗಿದ್ದು, ಇದೇ ವೇಳೆ 270 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.
ರಾಜ್ಯದಲ್ಲಿ ಗುರುವಾರ 14,142 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 11,10,025 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,49,496 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ 15,306 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 14,74,846 ಕ್ಕೆ ಏರಿಕೆಯಾಗಿದ್ದು, 2431 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ 19,637 ಜನರಿಗೆ ಸೋಂಕು ದೃಢಪಟ್ಟಿದೆ ಹಾಗೂ ಇದೇ ಸಮಯದಲ್ಲಿ 143 ಜನರು ಮೃತಪಟ್ಟಿದ್ದಾರೆ. 2,37,518 ಸಕ್ರಿಯ ಪ್ರಕರಣಗಳು ಇವೆ.

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಪಟ್ಟಣದ ಹೆಸರು ಬದಲಾವಣೆಗೆ ಸಚಿವ ಸಂಪುಟ ಅನುಮೋದನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement