ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಕೊರೊನಾ ಸೋಂಕು

ನವ ದೆಹಲಿ: ಲೆಫ್ಟಿನೆಂಟ್ ಗವರ್ನರ್ (ಎಲ್‌ ಜಿ) ಅನಿಲ್ ಬೈಜಾಲ್ ಕೊರನಾ ಸೋಂಕಿಗೆ ಒಳಗಾಗಿದ್ದಾರೆ. ಅನಿಲ್ ಬೈಜಾಲ್ ಅವರು ತಮ್ಮ ನಿವಾಸದಲ್ಲಿ ಪ್ರತ್ಯೇಕವಾಗಿ ಇರಲಿದ್ದೇನೆ ಹಾಗೂ ಅಲ್ಲಿಂದಲೇ ದೆಹಲಿಯ ಪರಿಸ್ಥಿತಿ ಮೇಲ್ವಿಚಾರಣೆ ಮಾಡುತ್ತೇನೆ ಎಂದು ಹೇಳಿದ್ದಾರೆ
ಅನಿಲ್ ಬೈಜಾಲ್ ಟ್ವಿಟ್ಟರ್ ನಲ್ಲಿ “ನಾನು ಸೌಮ್ಯ ರೋಗಲಕ್ಷಣಗಳೊಂದಿಗೆ ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ. ರೋಗಲಕ್ಷಣಗಳು ಪ್ರಾರಂಭವಾದಾಗಿನಿಂದ ನನ್ನನ್ನು ನಾನು ಪ್ರತ್ಯೇಕಿಸಿಕೊಂಡಿದ್ದೇನೆ ಮತ್ತು ನನ್ನೊಂದಿಗೆ ಸಂಪರ್ಕದಲ್ಲಿದ್ದವರೆಲ್ಲರನ್ನೂ ಪರೀಕ್ಷಿಸಲಾಯಿತು. ದೆಹಲಿಯ ಪರಿಸ್ಥಿತಿಯನ್ನು ನಿವಾಸದಿಂದಲೇ ಮೇಲ್ವಿಚಾರಣೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ