ಮೋಟಾರು ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ವಾಹನ ತೆರಿಗೆ ಪಾವತಿಸುವವರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ನಿರಾಳವಾಗುವ ಸುದ್ದಿ ನೀಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಉಲ್ಬಣಗೊಂಡು ಕರ್ಫ್ಯೂ ಜಾರಿ ಆಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಲಾಗಿದೆ.
ಕರ್ನಾಟಕ ರಾಜ್ಯದ ಎಲ್ಲ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿ ಹೊರತುಪಡಿಸಿ) ಅನ್ವಯಿಸುವಂತೆ ವಾಹನ ತೆರಿಗೆ ಪಾವತಿಸುವ ಅವಧಿ ವಿಸ್ತರಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಅಧಿಸೂಚನೆ ಸಂಖ್ಯೆ ಟಿಡಿ 1 ಟಿಡಿಆರ್ 2021 ದಿನಾಂಕ: ಏಪ್ರಿಲ್ 12, 2021 ಅನ್ವಯ ದಿನಾಂಕ: ಏಪ್ರಿಲ್ 15, 2021ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಏಪ್ರಿಲ್ 30, 2021ರ ವರೆಗೆ ವಿಸ್ತರಿಸಿದ ಅವಧಿಯನ್ನು ದಂಡ ರಹಿತವಾಗಿ ಪಾವತಿಸುವ ಅವಧಿಯನ್ನು ಮೇ 31, 2021 ರ ವರೆಗೆ ವಿಸ್ತರಿಸಿ ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement