ಕೊರೊನಾದಿಂದ ಮಂತ್ರಾಲಯ ಶ್ರೀಗಳ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ನಿಧನ

ರಾಯಚೂರು: ಕೊರೊನಾ ಸೋಂಕಿಗೆ ತುತ್ತಾಗಿದ್ದ ಮಂತ್ರಾಲಯದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರ ಆಪ್ತ ಕಾರ್ಯದರ್ಶಿ ಸುಯಮೀಂದ್ರ ಆಚಾರ್ ಅವರು ಅವರು ಶುಕ್ರವಾರ ನಿಧನರಾಗಿದ್ದಾರೆ.
ಸುಯಮೀಂದ್ರ ಆಚಾರ್ ಅವರು ಕಳೆದ ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಸಂಜೆ ದೆಹಲಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಈ ನಡುವೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂತ್ರಾಲಯ ಮಠದಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಮೇ 1 ರಿಂದ ಪ್ರತ್ಯಕ್ಷದರ್ಶನ ,ತೀರ್ಥಪ್ರಸಾದ ವ್ಯವಸ್ಥೆಯಿರುವುದಿಲ್ಲ. ಭಕ್ತರು ಆನ್‌ಲೈನ್ ಮೂಲಕ ಸೇವೆಯಲ್ಲಿ ಪಾಲ್ಗೊಳ್ಳಬಹುದು ಎಂದು ಮಠದ ಪ್ರಕಟಣೆ ತಿಳಿಸಿದೆ.

5 / 5. 5

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ನಿಮ್ಮ ಕಾಮೆಂಟ್ ಬರೆಯಿರಿ

advertisement