ಬಳ್ಳಾರಿ ಪಾಲಿಕೆ ಕೈ ವಶ.. ಬಿಜೆಪಿಗೆ ಮುಖಭಂಗ

ಬಳ್ಳಾರಿ : ತೀವ್ರ ಕುತೂಹಲ ಮೂಡಿಸಿದ್ದಂತ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಅಡಳಿತಾರೂಢ ಬಿಜೆಪಿ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್‌ ಭರ್ಜರಿ ಜಯ ಸಾಧಿಸುವುದರ ಮೂಲಕ ಬಳ್ಳಾರಿ ಪಾಲಿಕೆ ಕೈ ವಶವಾಗಿದೆ.
ಬಳ್ಳಾರಿಯ 39 ವಾರ್ಡ್ ಗಳಿಗೆ ನಡೆದ ಚುನಾವಣೆ ಮತ ಎಣಿಕೆ ಕಾರ್ಯ ಶುಕ್ರವಾರ ನಡೆಯಿತು. 39 ವಾರ್ಡ್ ಗಳ ಪೈಕಿ, ಕಾಂಗ್ರೆಸ್ ಅಭ್ಯರ್ಥಿಗಳು 21 ಸ್ಥಾನಗಳಲ್ಲಿ ಜಯ ಗಳಿದ್ದಾರೆ. ಬಿಜೆಪಿ ಅಭ್ಯರ್ಥಿಗಳು 13ರಲ್ಲಿ ಗೆಲುವು ಸಾಧಿಸಿದ್ದಾರೆ, 5 ಸ್ಥಾನಗಳಲ್ಲಿ ಇತರ ಹಾಗೂ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಬಳ್ಳಾರಿ ಮಹಾನಗರ ಪಾಲಿಕೆಯ ವಾರ್ಡ್ ನಂ 18ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಶಾಸಕ ಸೋಮಶೇಖರ್ ರೆಡ್ಡಿ ಪುತ್ರ ಶ್ರವಣ ಕುಮಾರ್ ರೆಡ್ಡಿ ಸೋಲು ಕಂಡಿದ್ದಾರೆ. ಈ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ. ನಂದೀಶ್ 128 ಮತಗಳಿಂದ ಗೆಲುವು ಸಾಧಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement