ರಾಜ್ಯಪಾಲ ಹುದ್ದೆಗೆ ನಿವೃತ್ತ ನ್ಯಾಯಮೂರ್ತಿಯೊಬ್ಬರಿಂದ ಲಂಚ:ಇದು ದುರದೃಷ್ಟಕರ ಎಂದು ಹೈಕೋರ್ಟ್

ಬೆಂಗಳೂರು: ರಾಜ್ಯಪಾಲ ಹುದ್ದೆ ಪಡೆಯಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರು ಲಂಚ ನೀಡಿರುವ ಕುರಿತು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ನಿವೃತ್ತ ನ್ಯಾಯಮೂರ್ತಿಯೊಬ್ಬರು ಅನೇಕ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಯುವರಾಜ್‌ ಸ್ವಾಮಿಗೆ ಲಂಚ ನೀಡಿದ್ದಾರೆಂಬ ವಿಷಯವು ನಿಜಕ್ಕೂ ದುರದೃಷ್ಟಕರ ಎಂದು ಹೇಳಿದೆ.
ಉದ್ಯಮಿ ಸುರೇಂದ್ರ ರೆಡ್ಡಿ ಎಂಬುವವರಿಗೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನ ಕೊಡಿಸುವ ಆಮಿಷವೊಡ್ಡಿಒಂದು ಕೋಟಿ ರೂ. ಪಡೆದು ವಂಚನೆ ಎಸಗಿದ ಪ್ರಕರಣ ಸೇರಿ ಒಟ್ಟು ಆರು ವಂಚನೆ ಪ್ರಕರಣಗಳಲ್ಲಿ ಆರೋಪಿ ಯುವರಾಜ್ ಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ವೇಳೆ ನ್ಯಾ.ಕೆ. ನಟರಾಜನ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ರಾಜ್ಯಪಾಲ ಹುದ್ದೆಯ ಆಸೆ ತೋರಿಸಿ ಈತ 8.5 ಕೋಟಿ ರೂ. ಲಂಚ ಪಡೆದಿದ್ದಾನೆ. ನಿವೃತ್ತ ನ್ಯಾಯಮೂರ್ತಿಯೊಬ್ಬರು ಹುದ್ದೆಗಾಗಿ ಲಂಚ ನೀಡಿರುವುದು ದುರದೃಷ್ಟಕರ. ಇದು ನ್ಯಾಯಮೂರ್ತಿಗಳ ಘನತೆ ಜತೆಗೆ ರಾಜ್ಯಪಾಲರ ಹುದ್ದೆಯ ವರ್ಚಸ್ಸು ಎರಡನ್ನೂ ಕುಗ್ಗಿಸಲಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಅಭಿಪ್ರಾಯಪಟ್ಟಿದೆ. ಅಲ್ಲದೆ, ನಿವೃತ್ತ ನ್ಯಾಯಮೂರ್ತಿಗಳಿಗೆ ವಂಚಿಸಿದ ಆರೋಪ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿ ಯುವರಾಜ್ ಸ್ವಾಮಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿ ಆದೇಶಿಸಿರುವುದು ಸರಿಯಾದ ಕ್ರಮವಲ್ಲ ಎಂದು ಹೈಕೋರ್ಟ್ ಅಸಮಾಧಾನಪಟ್ಟಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement