ನಗರಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು.. ಆದರೆ ಸಂಭ್ರಮ ಪಡಲು ಅಭ್ಯರ್ಥಿಯೇ ಇಲ್ಲ

ರಾಮನಗರ: ರಾಮನಗರ ನಗರಸಭೆ​​ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯೊಬ್ಬರು ಪ್ರಚಂಡ ಗೆಲುವು ಸಾಧಿಸಿದ್ದಾರೆ. ಆದರೆ ಗೆಲುವಿನ ಸಂಭ್ರಮಾಚರಣೆ ಮಾಡಲು ಈ ಅಭ್ಯರ್ಥಿಯೇ ಇಲ್ಲ.
ಶುಕ್ರವಾರ ಮತ ಎಣಿಕೆ ನಡೆದಾಗ ಕಾಂಗ್ರೆಸ್ ಅಭ್ಯರ್ಥಿ ಲೀಲಾ ಗೋವಿಂದರಾಜು 917 ಮತಗಳನ್ನ ಪಡೆದು 810 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ. ಆದರೆ ಇವರುಒಂದು ದಿನ ಮೊದಲು ಅಂದರೆ ಗುರುವಾರ ಕೊರೊನಾ ಸೋಂಕಿನಿಂದ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರನ್ನು ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ರಾಮನಗರ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಖಾತೆ ತೆರೆದಿಲ್ಲ. 31 ವಾರ್ಡ್ ಗಳ ಪೈಕಿ ಒಂದೂ ವಾರ್ಡ್ ನಲ್ಲೂ ಬಿಜೆಪಿ ಖಾತೆ ತೆರೆದಿಲ್ಲ. 31 ವಾರ್ಡ್ ಗಳಲ್ಲೂ ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.
ಸ್ವತಃ ಜಿಲ್ಲಾ ಉಸ್ತುವಾರಿಯಾಗಿರುವ ಸಚಿವ ಅಶ್ವಥ್ ನಾರಾಯಣ್ ಅಬ್ಬರದ ಪ್ರಚಾರ ನಡೆಸಿದ್ದರು. ಒಟ್ಟಾರೆ 31 ವಾರ್ಡ್ ಗಳ ಪೈಕಿ ಕಾಂಗ್ರೆಸ್-19, ಜೆಡಿಎಸ್-11, ಪಕ್ಷೇತರ -01 ವಾರ್ಡ್​​ನಲ್ಲಿ ಗೆಲುವು ಸಾಧಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement