ಕಲಬುರಗಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೋವಿಡ್‌ ರೋಗಿಗಳು ಸಾವು..?!

posted in: ರಾಜ್ಯ | 0

ಕಲಬುರಗಿ : ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ನಾಲ್ವರು ಕೊರೊನಾ ಸೋಂಕಿತ ರೋಗಿಗಳು ಮೃತಪಟ್ಟ ಘಟನೆ ಕಲಬುರಗಿಯಲ್ಲಿ ಶನಿವಾರ ನಡೆದ ವರದಿಯಾಗಿದೆ.
ಕಲಬುರಗಿ ನಗರದ ಆಸ್ಪತ್ರೆಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿ ವೆಂಟಿಲೇಟರ್ ನಲ್ಲಿದ್ದ ನಾಲ್ವರು ಕೊರೊನಾ ಸೋಂಕಿತ ರೋಗಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲು ಆಸ್ಪತ್ರೆ ಸಿಬ್ಬಂದಿಗಳು ಪ್ರಯತ್ನ ಮಾಡಿದ್ದು, ಆದರೆ ಸ್ಥಳಾಂತರಿಸುವಷ್ಟರಲ್ಲಿ ಕೊರೊನಾ ರೋಗಿಗಳು ಮೃತಪಟ್ಟಿದ್ದಾರೆ ಎಂದು ವಿದ್ಯುನ್ಮಾನ ಮಾಧ್ಯಮಗಳು ವರದಿ ಮಾಡಿವೆ. ಘಟನೆ ಹಿನ್ನೆಲೆ ಮೃತ ಸಂಬಂಧಿಕರು ಆಸ್ಪತ್ರೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ