ಕೇಂದ್ರದಿಂದ ರೆಮ್ಡೆಸಿವಿರ್, ಆಮ್ಲಜನಕ ಪೂರೈಕೆ ಹೆಚ್ಚಳ

ನವ ದೆಹಲಿ: ರಾಜ್ಯದಲ್ಲಿ ಆಮ್ಲಜನಕ, ರೆಮ್ಡೆಸಿವಿರ್ ಕೊರತೆಯಾಗಿದೆ ಎನ್ನುವ ಹೊತ್ತಲ್ಲೇ ಕೇಂದ್ರದಿಂದ ರಾಜ್ಯಕ್ಕೆ ಸಮಾಧಾನದ ಸುದ್ದಿ ಸಿಕ್ಕಿದೆ.
ವಿವಿಧ ರಾಜ್ಯಗಳಿಗೆ ಶನಿವಾರ 16.5 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಚುಚ್ಚುಮದ್ದು ಹಂಚಿಕೆ ಮಾಡಲಾಗಿದ್ದು, ಕರ್ನಾಟಕ ರಾಜ್ಯಕ್ಕೆ 1.62 ಲಕ್ಷ ವಯಲ್ಸ್ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಇದು ಮೇ 3ರಿಂದ 9ರ ವರೆಗಿನ ಅವಧಿಯ ಬಳಕೆಗೆಗಾಗಿ ರಮ್ಡೆಸಿವಿರ್‌ ಚುಚ್ಚುಮದ್ದು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.
ಅದೇ ರೀತಿ ಕರ್ನಾಟಕದ ಆಮ್ಲಜನಕ ಪಾಲನ್ನು (ಪ್ರತಿದಿನ) 865 ಮೆಟ್ರಿಕ್ ಟನ್ನಿಗೆ ಏರಿಸಲಾಗಿದೆಎಂದು ಅವರು ಟ್ವೀಟ್‌ ಮಾಡಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ' ಹೇಳಿಕೆ : ಬಿಜೆಪಿ ಶಾಸಕ ಯತ್ನಾಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ನಿಮ್ಮ ಕಾಮೆಂಟ್ ಬರೆಯಿರಿ

advertisement