ಕೊರೊನಾ ನಿಯಂತ್ರಣಕ್ಕೆ ತಜ್ಞರ ಸಮಿತಿ ರಚನೆ:ಸಿಎಂ ಬಿಎಸ್‌ವೈ

posted in: ರಾಜ್ಯ | 0

ಬೆಂಗಳೂರು : ಕರ್ನಾಟಕದಲ್ಲಿ ಮಹಾಮಾರಿ ‘ಕೊರೊನಾ ‘ತಡೆಗೆ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ’ ತೀರ್ಮಾನಿಸಿದ್ದಾರೆ.
ಅಧಿಕೃತ ನಿವಾಸ ಕಾವೇರಿಯಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದಅವರು, ಕೊರೊನಾ ಸೋಂಕಿತರ ಚಿಕಿತ್ಸೆಗೆ ಬೆಡ್, ಆಕ್ಸಿಜನ್ ಪೂರೈಕೆ, ಲಸಿಕೆ ನೀಡುವ ಸಂಬಂಧ ಚರ್ಚೆ ನಡೆಸಿದರು.
ಕೊರೊನಾ ಸೋಂಕಿತರಿಗೆ ಚಿಕಿತ್ಸೆಗಾಗಿ ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗುವುದು, ಆದ್ದರಿಂದ ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕ ನೀಡಿ ಕೊರೊನಾ ಚಿಕಿತ್ಸೆಗೆ ಬಳಸಿಕೊಳ್ಳಲಾಗುವುದು, ಕೋವಿಡ್ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ತಜ್ಞರ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು
ರೆಮ್ಡೆಸಿವಿರ್ ಮತ್ತು ಆಕ್ಸಿಜನ್ ಅನಗತ್ಯವಾಗಿ ಬಳಕೆ ಮಾಡಲಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆಡಿಟ್ ವ್ಯವಸ್ಥೆ ರಚಿಸಲಾಗುವುದು, ಲಸಿಕೆ ವಿತರಣೆ ಪ್ರಕ್ರಿಯೆಯೆನ್ನು ವೇಗವನ್ನು ಹೆಚ್ಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ