ಬೆಳಗಾವಿ 11 ಪತ್ರಕರ್ತರಿಗೆ ಕೊರೊನಾ ಸೋಂಕು

ಬೆಳಗಾವಿ  :ಬೆಳಗಾವಿಯ ಕೆಲ ಪತ್ರಕರ್ತರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಮತ ಎಣಿಕೆಗೆ ಕೋವಿಡ್ ನೆಗೆಟಿವ್ ವರದಿ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಗುರುವಾರ ಪತ್ರಕರ್ತರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂದರ್ಭದಲ್ಲಿ 11 ಪತ್ರಕರ್ತರಿಗೆ ಕೋವಿಡ್ ಇರುವುದು ದೃಢಪಟ್ಟಿದೆ. ವಾರ್ತಾ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಸೇರಿ ಮಾಧ್ಯಮ ಕ್ಷೇತ್ರದ ಒಟ್ಟು 12 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

1 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಾಲ್ಮೀಕಿ ಹಗರಣ | ರಾಜ್ಯ ಸರ್ಕಾರಕ್ಕೆ ಹಿನ್ನಡೆ, ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ; ಹಲವರಿಗೆ ಶುರುವಾಯ್ತು ಢವ ಢವ

ನಿಮ್ಮ ಕಾಮೆಂಟ್ ಬರೆಯಿರಿ

advertisement