ಮದ್ರಾಸ್ ಹೈಕೋರ್ಟ್ ಛೀಮಾರಿ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಚುನಾವಣಾ ಆಯೋಗ

ಹೊಸದಿಲ್ಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಚುನಾವಣೆ ಆಯೋಜಿಸಿರುವುದಕ್ಕೆ ಮದ್ರಾಸ್ ಹೈಕೋರ್ಟ್ ನಿಂದ ನಿರ್ದಯ, ಅವಹೇಳನಕಾರಿ ಛೀಮಾರಿ ಎದುರಿಸಿದ್ದ ಚುನಾವಣಾ ಆಯೋಗವು ಶನಿವಾರ ಸುಪ್ರೀಂಕೋರ್ಟ್‍ಗೆ ದೂರು ನೀಡಿದೆ.
ಏಪ್ರಿಲ್ 26ರಂದು ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್, ಕೋವಿಡ್-19 ಸೋಂಕು ತೀವ್ರವಾಗಿ ಹರಡುತ್ತಿರುವ ವೇಳೆ ತಮಿಳುನಾಡು ಚುನಾವಣೆಯಲ್ಲಿ ರಾಜಕೀಯ ಸಮಾವೇಶ ಹಾಗೂ ಜಾಥಾ ತಡೆ ಹೇರದ ಚುನಾವಣಾ ಆಯೋಗದ ವಿರುದ್ಧ ಬಹುಶಃ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಹೇಳಿತ್ತು.
ಸುಪ್ರೀಂಕೋರ್ಟ್‍ನಲ್ಲಿ ಸೋಮವಾರ ಚುನಾವಣಾ ಆಯೋಗದ ಅರ್ಜಿ ವಿಚಾರಣೆ ನಡೆಯಲಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಯುಪಿಐನಲ್ಲಿ ₹2,000ಕ್ಕಿಂತ ಹೆಚ್ಚಿನ ಹಣ ಪಾವತಿಗೆ ಶೇ. 0.4ರಷ್ಟು ಶುಲ್ಕ ; ಇದು ಯಾರಿಗೆ ಅನ್ವಯ, ಯಾರಿಗೆ ಎಂದಿನಂತೆ ಫ್ರೀ?

ನಿಮ್ಮ ಕಾಮೆಂಟ್ ಬರೆಯಿರಿ

advertisement