ಪದೇಪದೇ ಬೆದರಿಕೆ ಕರೆ: ಲಂಡನ್‌ಗೆ ತೆರಳಿದ ಪೂನಾವಾಲಾ..?

ಸೆರಮ್ ಸಂಸ್ಥೆಯ ಸಿಇಒ ಅದಾರ್ ಪೂನಾವಾಲಾ ಅವರಿಗೆ ಪ್ರಭಾವಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದ್ದು, ಪ್ರಾಣ ಭೀತಿಯಿಂದ ಅವರು ಲಂಡನ್ ಗೆ ತೆರಳಿದ್ದಾರೆ ಎನ್ನಲಾಗಿದೆ.
ದೇಶದ ಪ್ರಭಾವಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬರುತ್ತಿದೆ, ಮುಖ್ಯಮಂತ್ರಿಗಳು, ಉದ್ಯಮಿಗಳಿಂದ ಬೆದರಿಕೆ ಕರೆ ಬರುತ್ತಿದೆ. ಕೋವಿಶೀಲ್ಡ್ ಲಸಿಕೆ ಬೇಗನೇ ನೀಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಇಂಗ್ಲೆಂಡ್ ನಲ್ಲಿರುವ ಪೂನಾವಾಲಾ ಅವರು ಇಂಗ್ಲೆಂಡ್ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಮಾಹಿತಿ ಬಿಚ್ಚಿಟ್ಟಿದ್ದಾರೆ. ಬೇಗ ಬೇಗ ಕೊರೊನಾ ಲಸಿಕೆ ನೀಡಿದರೆ ನಿಮಗೆ ಒಳ್ಳೆಯದು , ಇಲ್ಲವಾದರೆ. . ತಕ್ಷಣವೇ ಲಸಿಕೆ ಪೂರೈಸಬೇಕು ಎಂದು ಪ್ರಭಾವಿ ವ್ಯಕ್ತಿಗಳು ಕರೆ ಮಾಡಿ ಬೆದರಿಕೆಯೊಡ್ಡಿದ್ದಾರೆ ಎಂದು ಪೂನಾವಾಲಾ ಹೇಳಿದ್ದಾರೆ.
ಈ ಬಗ್ಗೆ ಇಂಗ್ಲೆಂಡ್ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅದಾರ್ ಪೂನಾವಾಲಾ ಈ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗ ಲಸಿಕೆಗಾಗಿ ನನ್ನನ್ನು ಅವಲಂಬಿಸಿದ್ದಾರೆ ಎಂಬ ಪ್ರಜ್ಞೆ ಮತ್ತು ಭಾವನೆ ನನಗಿದೆ. ಮತ್ತು ನಾನು ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇನೆ. ಇಂತಹ ಟೀಕೆಗಳಿಂದ ನಾನು ತುಂಬಾ ನಿರಾಶರಾಗಿದ್ದೇನೆ ಎಂದು ಹೇಳಿದ್ದಾರೆ.
ಸೀರಮ್ ಇನ್ಸ್ಟಿಟ್ಯೂಟ್ ಸುಮಾರು ಒಂದು ಸಾವಿರ ಹೊಸ ಉದ್ಯೋಗಿಗಳನ್ನು ನೇಮಿಸಿಕೊಂಡಿದೆ ಮತ್ತು ಪ್ರತಿದಿನ 20 ಗಂಟೆಗಳ ಕಾಲ ಅದರ ಕೆಲಸ ನಿರ್ವಹಿಸುತ್ತಿದ್ದು, ಇದು ಗರಿಷ್ಠ ಸಾಧ್ಯ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಸೀರಮ್ ಇನ್ಸ್ಟಿಟ್ಯೂಟ್ ಮುಂದಿನ ವಾರ ನೊವಾವಾಕ್ಸ್ ಉತ್ಪಾದನೆಯನ್ನು ಪ್ರಾರಂಭಿಸಲಿದೆ ಆದರೆ ಲಸಿಕೆ-ಸಂಬಂಧಿತ ಉತ್ಪನ್ನಗಳ ಮೇಲೆ ಅಮೆರಿಕದ ನಿಷೇಧದಿಂದಾಗಿ ಮೂಲತಃ ಯೋಜಿಸಿದ್ದಕ್ಕಿಂತ ಮೂರನೇ ಒಂದು ಭಾಗವನ್ನು ಮಾತ್ರ ಉತ್ಪಾದಿಸಲು ಸಾಧ್ಯವಾಗುತ್ತಿದೆ. ಸೀರಮ್ ಇನ್ಸ್ಟಿಟ್ಯೂಟ್ನ ಲಸಿಕೆಗಳು ವಿಶ್ವದಲ್ಲೇ ಅಗ್ಗವಾಗಿವೆ ಎಂದು ಅವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ತಪ್ಪು ಮಾಹಿತಿ ನೀಡಲಾಗಿದೆ : ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಮೋದಿ ಭೇಟಿಗೆ ಸಮಯಾವಕಾಶ ಕೋರಿ ಬಹಿರಂಗ ಪತ್ರ ಬರೆದ ಖರ್ಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement