ಅರ್ಧದಲ್ಲೇ ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಬಿಜೆಪಿ ಅಭ್ಯರ್ಥಿ..!

posted in: ರಾಜ್ಯ | 0

ರಾಯಚೂರು : ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಸ್ಕಿ ವಿಧಾನಸಭೆ ಚುನಾವಣೆಯ ಫಲಿತಾಂಶದ ಮತ ಎಣಿಕೆ ನಡೆಯುತ್ತಿದ್ದು, ಮತ ಎಣಿಕೆಯ 16 ಸುತ್ತುಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆಯೇ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಮತ ಎಣಿಕೆ ಕೆಂದ್ರದಿಂದ ಹೊರ ನಡೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪಗೌಡ ಪಾಟೀಲ್, ಮಸ್ಕಿಯಲ್ಲಿ ನಾನು ಸೋಲುವುದಿಲ್ಲ ಎಂದು ಭಾವಿಸಿದ್ದೆ. ಆದರೆ ಜನ ಹೊಸಬರನ್ನು ಬಯಸಿದ್ದಾರೆ. ಜನ ಕ್ಷೇತ್ರದಲ್ಲಿ ಬದಲಾವಣೆ ಬಯಸಿ ಮತ ಹಾಕಿದ್ದಾರೆ ಎಂದು ಹೇಳಿದ್ದಾರೆ.
ಪ್ರತಿ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿ ಬೆಂಬಲಿತ ಭಾಗದಲ್ಲೇ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದರಿಂದ ಪ್ರತಾಪಗೌಡ ಪಾಟೀಲ್ ಸೋಲುಪ್ಪಿಕೊಂಡು ಹೊರ ನಡೆದಿರುವ ಘಟನೆ ನಡೆದಿದೆ. ಜೊತೆಗೆ ಸ್ವಪಕ್ಷೀಯರೇ ತ್ನ ವಿರುದ್ಧ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ