ಐದು ರಾಜ್ಯಗಳ ಚುನಾವಣಾ ಫಲಿತಾಂಶ: ಮತ ಎಣಿಕೆ ಮೊದಲೇ ಶಸ್ತ್ರ ತ್ಯಾಗ ಮಾಡಿದ ಕಾಂಗ್ರೆಸ್‌..?

ನವ ದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಭಾನುವಾರ ಆರಂಭವಾಗಿದ್ದು, ಬಹುತೇಕ ಎಲ್ಲ ಕ್ಷೇತ್ರದ ಫಲಿತಾಂಶ ಇಂದೇ ಪ್ರಕಟವಾಗಲಿದೆ.ಆದರೆ ಕಾಂಗ್ರೆಸ್‌ ಟಿವಿ ಚರ್ಚೆಗಳಲ್ಲಿ ಭಾಗವಹಿಸಬಾರದು ಎಂದು ಒಮ್ಮೆಲೇ ನಿರ್ಧಾರ ತೆಗೆದುಕೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ದೇಶದಲ್ಲಿ ಕೊರೋನಾ ಪರಿಸ್ಥಿತಿ ಕೈ ಮೀರಿದ್ದು ಈ ಸಂದರ್ಭದಲ್ಲಿ ಫಲಿತಾಂಶದ ನಂತರ ಟಿವಿ ಚರ್ಚೆಗಳಲ್ಲಿ ಭಾಗಿಯಾಗುವುದಿಲ್ಲವೆಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್‌ ಮಾಡಿದ್ದಾರೆ.
ದೇಶದಲ್ಲಿ ಹಿಂದೆಂದೂ ಕಾಣದಂತಹ ಬಿಕ್ಕಟ್ಟು ಉಂಟಾಗಿದೆ. ಕೋವಿಡ್ ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ. ಇಂತಹ ಸಂದರ್ಭದಲ್ಲಿ ಚುನಾವಣೆಯಲ್ಲಿನ ಸೋಲು ಗೆಲುವಿನ ಬಗ್ಗೆ ಚರ್ಚೆ ಮಾಡುವುದು ಸರಿಯಲ್ಲ. ಹೀಗಾಗಿ ಕಾಂಗ್ರೆಸ್ ಪಕ್ಷದ ನಾಯಕರು, ವಕ್ತಾರರು ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ರಣದೀಪ್ ಸುರ್ಜೆವಾಲಾ ಟ್ವೀಟ್‌ನಲ್ಲಿ ಹೇಳಿದ್ದಾರೆ.
ಚುನಾವಣೆಯಲ್ಲಿ ಸೋಲಬಹುದು, ಇಲ್ಲವೇ ಗೆಲ್ಲಬಹುದು. ಆದರೆ, ದೇಶದ ಜನರಿಗೆ ಸದ್ಯದ ಪರಿಸ್ಥಿತಿಯಲ್ಲಿ ಆಮ್ಲಜನಕ, ಬೆಡ್, ಔಷಧ, ವೆಂಟಿಲೇಟರ್ ಅಗತ್ಯವಿದ್ದು, ಅದನ್ನು ತಲುಪಿಸಲು ಜೊತೆಯಾಗಿ ನಿಲ್ಲಬೇಕಿರುವುದು ನಮ್ಮ ಕರ್ತವ್ಯವಾಗಿದೆ .ಮಾಧ್ಯಮದವರು ಕೇಳುವ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಲು ನಾವು ಸಿದ್ಧವಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ವಿಶೇಷವೆಂದರೆ ಮೊದಲ ಚುನಾವಣಾಮತೆಣಿಕೆಯಲ್ಲಿ ಕಾಂಗ್ರೆಸ್‌ ಐದು ರಾಜ್ಯಗಳಲ್ಲಿ ಯಾವ ರಾಜ್ಯಗಳಲ್ಲಿಯೂ ಮುನ್ನಡೆ ಸಾಧಿಸಿಲ್ಲ. ವಿಶೇಷವಾಗಿ ಅದು ಹೆಚ್ಚು ನಿರೀಕ್ಷೆ ಹೊಂದಿದ್ದ ಕೇರಲದಲ್ಲಿ ಅದರ ನಿರ್ವಹಣೆ ಈವರೆಗಿನ ಮತ ಎಣಿಕೆಯಲ್ಲಿ ಅತ್ಯಂತ ಕಳಪೆಯಾಗಿದೆ. ಹೀಗಾಗಿ ಇದೇ ಸಂದರ್ಭದಲ್ಲಿ ಕಾಂಗ್ರೆಸ್‌ ವಿದ್ಯನ್ಮಾನ ಮಾಧ್ಯಮಗಳಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಚರ್ಚೆಯಲ್ಲಿ ಪಾಲ್ಗೊಳ್ಳಬಾರದು ಎಂದು ನಿರ್ಧರಿಸಿರುವುದಕ್ಕೆ ಈ ಐದು ರಾಜ್ಯಗಳಲ್ಲಿ ಕಾಂಗ್ರೆಸ್‌ನ ಕಳಪೆ ಕಾರ್ಯನಿರ್ಹಣೆಯೇ ಕಾರಣ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಪ್ರಮುಖ ಸುದ್ದಿ :-   'ಅಕ್ರಮ' ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement