ಕರ್ನಾಟಕದ ಕೆಲವೆಡೆ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ 4ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಮಳೆ ಬರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ರಾಜ್ಯದ ಹುಬ್ಬಳ್ಳಿ, ರಾಮಗಿರಿ, ಬೆಳಗಾವಿ, ಅಜ್ಜಂಪುರ, ಸಿದ್ದಾಪುರ, ಸಾಗರ, ಕುಮಟಾ, ಶಿವಮೊಗ್ಗ, ಮೊಳಕಾಲ್ಮೂರು, ಬಂಡೀಪುರದಲ್ಲಿ ಮಳೆಯಾಗಿದೆ.
ಸಿಡಿಲು ಬಡಿದು ಕಲಬುರಗಿ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮತ್ತು ಬೀದರ್ ಜಿಲ್ಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದ ಹೊಲದಲ್ಲಿ ಶನಿವಾರ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement