ದೀದಿ ಅಭಿನಂದಿಸಿ ಪ್ರಧಾನಿ ಮೋದಿ ಮಾಡಿದ ಟ್ವೀಟ್‌ಗೆ 36 ಲಕ್ಷಕ್ಕೂ ಹೆಚ್ಚು ಜನರ ಪ್ರತಿಕ್ರಿಯೆ..!

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಮೂಲಕ ಹ್ಯಾಟ್ರಿಕ್ ಜಯಸಾಧಿಸಿದ ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಮಮತಾ ದೀದಿ ಅವರಿಗೆ ಅಭಿನಂದನೆಗಳು, ಪಶ್ಚಿಮ ಬಂಗಾಳದಲ್ಲಿ ನಮ್ಮ ಪಕ್ಷವನ್ನು ಆಶೀರ್ವದಿಸಿದ ಸಹೋದರಿಯರು, ಸಹೋದರಿಗೆ ಧನ್ಯವಾದಗಳು. ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಜನರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಕೋರೋನಾ ಸಾಂಕ್ರಾಮಿಕ ರೋಗವನ್ನು ಹೋಗಲಾಡಿಸಲು ಕೇಂದ್ರ ಸರ್ಕಾರ ಸಾಧ್ಯವಿರುವ ಎಲ್ಲ ಬೆಂಬಲ ನೀಡುತ್ತಲೇ ಇರುತ್ತದೆ. ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಗತ್ಯವಾದ ಎಲ್ಲ ಸಹಕಾರ ನೀಡುತ್ತೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಅವರ ಟ್ವೀಟ್ ಗೆ 36 ಲಕ್ಷಕ್ಕೂ ಅಧಿಕ ಸಂಖ್ಯೆಯ ಜನ ಪ್ರತಿಕ್ರಿಯೆ ನೀಡಿದ್ದಾರೆ.
ಪಶ್ಚಿಮಬಂಗಾಳದಲ್ಲಿ ಭರ್ಜರಿ ಜಯ ಸಾಧಿಸಿದ ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಅನೇಕ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಒಟ್ಟು 294 ಕ್ಷೇತ್ರಗಳಲ್ಲಿ ಟಿಎಂಸಿ 216 ರಲ್ಲಿ ಜಯಗಳಿಸಿದ್ದು ಅಥವಾ ಮುನ್ನಡೆಯಲಿದ್ದು, ಆದರೆ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಪರಾಭವಗೊಂಡಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ