ಮಸ್ಕಿಯಲ್ಲಿ 30 ಸಾವಿರಕ್ಕೂ ಹೆಚ್ಚು ಅಂತರದಿಂದ ಗೆದ್ದ ಕಾಂಗ್ರೆಸ್‌ ಅಭ್ಯರ್ಥಿ..!

ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಬಸನಗೌಡ ಪಾಟೀಲ್ ತುರುವಿಹಾಳ 30,666 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ.
ಕಾಂಗ್ರೆಸ್‌ ಅಭ್ಯರ್ಥಿ ಬಸನಗೌಡ ಪಾಟೀಲ್ ತುರುವಿಹಾಳ 86,222 ಮತ ಪಡೆದಿದ್ದರೆ ಬಿಜೆಪಿಯ ಪ್ರತಾಪ ಗೌಡ ಪಾಟೀಲ 55, 581 ಮತಗಳನ್ನುಪಡೆದು ಸೋಲುಂಡಿದ್ದಾರೆ.
ಮಸ್ಕಿ ಸೇರಿದಂತೆ ರಾಜ್ಯದ ಮೂರು ಕ್ಷೇತ್ರಗಳಲ್ಲಿ ಏ.17ರಂದು ಮತದಾನ ನಡೆದಿತ್ತು. ಭಾನುವಾರ ರಾಯಚೂರಿನ ಎಸ್​ಆರ್​ಪಿಎಸ್​ ಪಿಯು ಕಾಲೇಜಿನಲ್ಲಿ ಮತ ಎಣಿಕೆ ನಡೆದಿದ್ದು, ಮೊದಲ ಸುತ್ತಿನಲ್ಲೇ ಹೆಚ್ಚು ಮತ ಪಡೆಯುವ ಮೂಲಕ ಬಿಜೆಪಿ ಅಭ್ಯರ್ಥಿ ಹಿಂದಿಕ್ಕಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್​ ಕೊನೆವರೆಗೂ ಮುನ್ನಡೆ ಕಾಯ್ದುಕೊಂಡಿದ್ದರು.
ಅಂತಿಮವಾಗಿ ಕಾಂಗ್ರೆಸ್‌ ಅಭ್ಯರ್ಥಿ ತುರುವಿಹಾಳ 86,222 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ 55, 581 ಮತಗಳನ್ನ ಪಡೆದಿದ್ದು, ತುರುವಿಹಾಳ ಅವರು 30,666 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ ಎಣಿಕ ಅರ್ಧಲ್ಲಿಯೇ ಮತ ಎಣಿಕೆ ಕೇಂದ್ರದಿಂದ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಹೊರ ನಡೆದಾಗಲೇ ಎಲ್ಲರಿಗೂ ಬಿಜೆಪಿ ಸೋಲು ಮನದಟ್ಟಾಗಿತ್ತು.
ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ತುರುವಿಹಾಳ ಕೇವಲ 213 ಮತಗಳ ಅಂತರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪ್ರತಾಪ ಗೌಡ ಪಾಟೀಲ ವಿರುದ್ಧ ಸೋತಿದ್ದರು. ಈ ಬಾರಿ ಇಬ್ಬರ ಪಕ್ಷವೂ ಅದಲುಬದಲಾಗಿದೆ. ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ತುರುವಿಹಾಳ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement