ಚಾಮರಾಜನಗರಕ್ಕೆ 250 ಆಮ್ಲಜನಕ ಸಿಲಿಂಡರ್‌ ಕಳುಹಿಸಲಾಗಿದೆ: ಮೈಸೂರು ಜಿಲ್ಲಾಡಳಿತ

posted in: ರಾಜ್ಯ | 0

ಮೈಸೂರು: ಚಾಮರಾಜನಗರಕ್ಕೆ ಅಧಿಕೃತವಾಗಿ 250 ಆಮ್ಲಜನಕ ಸಿಲಿಂಡರ್‌ ಗಳನ್ನು ಭಾನುವಾರ ಮಧ್ಯರಾತ್ರಿಯ ವೇಳೆಗೆ ಕಳುಹಿಸಲಾಗಿದ್ದು, ಯಾವುದೇ ವಿಳಂಬವಾಗಿಲ್ಲ ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿದೆ‌.
ದ್ರವ ಆಮ್ಲಜನಕ ಬಳ್ಳಾರಿಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಅದು ಸರಿಯಾದ ಸಮಯದಲ್ಲಿ ಬಂದಿದ್ದೇಯೋ, ಇಲ್ಲವೋ ಗೊತ್ತಿಲ್ಲ. ಆದರೆ ಚಾಮರಾಜನಗರದ ಜಿಲ್ಲಾಡಳಿತದ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಮ್ಲಜನಕ ಸಿಲಿಂಡರ್ ಗಳನ್ನು ಕಳುಹಿಸಲಾಗಿದೆ. ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ. ಮೈಸೂರಿನ ಸೌತ್ರನ್ ಗ್ಯಾಸ್ ನಿಂದ 210 ಹಾಗೂ ಮೈಸೂರು ಜಿಲ್ಲಾ ಆಸ್ಪತ್ರೆಯಿಂದ 40 ಆಮ್ಲಜನಕ ಸಿಲಿಂಡರ್ ಗಳನ್ನು ಚಾಮರಾಜನಗರಕ್ಕೆ ಭಾನುವಾರ ಮಧ್ಯರಾತ್ರಿ ಕಳುಹಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 4

ನಿಮ್ಮ ಕಾಮೆಂಟ್ ಬರೆಯಿರಿ