ಚಾಮರಾಜನಗರ ಆಸ್ಪತ್ರೆ ದುರಂತ: ಆಮ್ಲಜನಕದ ಕೊರತೆಯಿಂದ ಸತ್ತಿದ್ದು 23ರಲ್ಲಿ ಮೂವರು ಮಾತ್ರ

posted in: ರಾಜ್ಯ | 0

ಬೆಂಗಳೂರು: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಿಕ ಕೊರತೆಯಿಂದ 24 ರೋಗಿಗಳು ಮೃತಪಟ್ಟಿರುವ ಘಟನೆ ಬಗ್ಗೆ ಎಲ್ಲಿ ಲೋಪವಾಗಿದೆ ಎಂದು ಸೂಕ್ತ ತನಿಖೆ ನಡೆಸುತ್ತೇವೆ. ಈ ಬಗ್ಗೆ ತನಿಖೆಯಲ್ಲಿ ಸತ್ಯಸತ್ಯತೆ ಹೊರಬರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ನಿನ್ನೆ ಬೆಳಗ್ಗೆ 7 ಗಂಟೆಯಿಂದ ಮಧ್ಯರಾತ್ರಿ ವರೆಗೆ 14 ಜನರು ಮೃತಪಟ್ಟಿದ್ದು, ಇವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಧ್ಯರಾತ್ರಿ 12 ರಿಂದ ಬೆಳಗ್ಗೆ 3 ಗಂಟೆ ವರೆಗೆ ಮೂವರು ಮೃತಪಟ್ಟಿದ್ದು, ಮುಂಜಾನೆ 3 ರಿಂದ 7ರವರೆಗೆ 7 ಜನಮೃತಪಟ್ಟಿದ್ದಾರೆ, 24 ಗಂಟೆಯಲ್ಲಿ ಒಟ್ಟು 23 ಜನರು ಸಾವಿಗೀಡಾಗಿದ್ದಾರೆ ಎಂದು ತಿಳಿಸಿದರು.
ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಆಮ್ಲಜನಕದ​ ಕೊರತೆಯಿಂದ ಮೂವರು ಮಾತ್ರ ಮೃತಪಟ್ಟಿದ್ದಾರೆ. ಸಂಭವಿಸಿರುವ ಘಟನೆ ಬಹಳ ದುಃಖಕರವಾಗಿದ್ದು, ಮೃತರ ಕುಟುಂಬಗಳೊಂದಿಗೆ ರಾಜ್ಯ ಸರ್ಕಾರವಿದೆ. ಘಟನೆಯ ತನಿಖೆಗೆ ಈಗಾಗಲೇ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ ಎಂದು ಹೇಳಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ