ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 44,438 ಏಕದಿನದ ಕೊರೊನಾ ಪ್ರಕರಣಗಳು ವರದಿಯಾಗಿದೆ.ಇದೇ ಸಮಯದಲ್ಲಿ ರಾಜ್ಯದಲ್ಲಿ 239 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 16,46,303ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 16,250ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಸೋಮವಾರ 22,112 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 8,19,404ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 115 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ 20,901 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 11,85,299ಕ್ಕೆ ಏರಿಕೆಯಾಗಿದೆ. ಇನ್ನು 4,44,734 ಸಕ್ರಿಯ ಪ್ರಕರಣಗಳಿವೆ.
ನಿಮ್ಮ ಕಾಮೆಂಟ್ ಬರೆಯಿರಿ