ಕೇಂದ್ರದ ಮಹತ್ವದ ನಿರ್ಧಾರ…100 ದಿನಗಳ ಕೋವಿಡ್ ಕರ್ತವ್ಯ ಪೂರೈಸಿದ ವೈದ್ಯಕೀಯ ಸಿಬ್ಬಂದಿಗೆ ಸರ್ಕಾರಿ ನೇಮಕಾತಿಗಳಲ್ಲಿ ಆದ್ಯತೆ

ನವ ದೆಹಲಿ; ಕೋವಿಡ್‌-19 ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿ ಲಭ್ಯತೆ ಹೆಚ್ಚಿಸಲು ಪ್ರಮುಖ ನಿರ್ಧಾರಗಳನ್ನು ಪ್ರಧಾನಿ ಸೋಮವಾರ ಅಧಿಕೃತಗೊಳಿಸಿದ್ದಾರೆ. 100 ದಿನಗಳ ಕಾಲ ಕೋವಿಡ್ ಕರ್ತವ್ಯಗಳನ್ನು ಪೂರೈಸುವ ವೈದ್ಯಕೀಯ ಸಿಬ್ಬಂದಿಗೆ ಮುಂಬರುವ ನಿಯಮಿತ ಸರ್ಕಾರಿ ನೇಮಕಾತಿಗಳಲ್ಲಿ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ.
ಕೋವಿಡ್ ನಿರ್ವಹಣೆಯಲ್ಲಿ ಸೇವೆಗಳನ್ನು ಒದಗಿಸುವ ವ್ಯಕ್ತಿಗಳಿಗೆ ಕನಿಷ್ಠ 100 ದಿನಗಳ ಕೋವಿಡ್ ಕರ್ತವ್ಯವನ್ನು ಪೂರ್ಣಗೊಳಿಸಿದ ನಂತರ ಮುಂಬರುವ ನಿಯಮಿತ ಸರ್ಕಾರಿ ನೇಮಕಾತಿಗಳಲ್ಲಿ ಆದ್ಯತೆ ನೀಡಲಾಗುವುದು ಎಂದು ಪಿಎಂಒ ಹೇಳಿಕೆ ಬಿಡುಗಡೆ ಮಾಡಿದೆ.
ಕೋವಿಡ್ ಸಂಬಂಧಿತ ಕೆಲಸದಲ್ಲಿ ತೊಡಗಿಸಿಕೊಳ್ಳಲು ಬಯಸುವ ವೈದ್ಯಕೀಯ ವಿದ್ಯಾರ್ಥಿಗಳು / ವೃತ್ತಿಪರರಿಗೆ ಸೂಕ್ತವಾಗಿ ಲಸಿಕೆ ನೀಡಲಾಗುವುದು. ಹೀಗೆ ತೊಡಗಿಸಿಕೊಂಡಿರುವ ಎಲ್ಲ ಆರೋಗ್ಯ ವೃತ್ತಿಪರರು ಕೋವಿಡ್ 19 ರ ವಿರುದ್ಧ ಹೋರಾಡುವ ಆರೋಗ್ಯ ಕಾರ್ಯಕರ್ತರು ಸರ್ಕಾರದ ವಿಮಾ ಯೋಜನೆಗೆ ಒಳಪಡಲಿದ್ದಾರೆ.
ಕನಿಷ್ಠ 100 ದಿನಗಳ ಕೋವಿಡ್ ಕರ್ತವ್ಯಕ್ಕೆ ಸೈನ್ ಅಪ್ ಮಾಡಿ ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಎಲ್ಲ ವೃತ್ತಿಪರರಿಗೆ ಭಾರತ ಸರ್ಕಾರದಿಂದ ಪ್ರಧಾನ ಮಂತ್ರಿಯ ಡಿಸ್ಟಿಂಗ್ವಿಶ್ಡ್ ಕೋವಿಡ್ ನ್ಯಾಷನಲ್ ಸರ್ವಿಸ್ ಸಮ್ಮಾನ ಸಹ ನೀಡಲಾಗುವುದು ಎಂದು ಅದು ಹೇಳಿದೆ.
ಕೋವಿಡ್ ಕರ್ತವ್ಯಕ್ಕಾಗಿ ವೈದ್ಯರು / ದಾದಿಯರನ್ನು ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸರ್ಕಾರ 2020 ಜೂನ್ 16 ರಂದು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಕೋವಿಡ್ ನಿರ್ವಹಣೆಗೆ ಸೌಲಭ್ಯಗಳು ಮತ್ತು ಮಾನವ ಸಂಪನ್ಮೂಲಗಳನ್ನು ಹೆಚ್ಚಿಸಲು ಸರ್ಕಾರವು 15,000 ಕೋಟಿ ರೂ.ಗಳ ವಿಶೇಷ ಸಾರ್ವಜನಿಕ ಆರೋಗ್ಯ ತುರ್ತು ಬೆಂಬಲವನ್ನು ಒದಗಿಸಿತು. ರಾಷ್ಟ್ರೀಯ ಆರೋಗ್ಯ ಮಿಷನ್ ಮೂಲಕ ತೊಡಗಿಸಿಕೊಳ್ಳುವ ಸಿಬ್ಬಂದಿ, ಹೆಚ್ಚುವರಿ 2206 ತಜ್ಞರು, 4685 ವೈದ್ಯಕೀಯ ಅಧಿಕಾರಿಗಳು ಮತ್ತು 25,593 ಸಿಬ್ಬಂದಿ ದಾದಿಯರನ್ನು ಈ ಪ್ರಕ್ರಿಯೆಯ ಮೂಲಕ ನೇಮಕ ಮಾಡಿಕೊಳ್ಳಲಾಯಿತು.
ಇಂಟರ್ನ್‌ಶಿಪ್ ರೊಟೇಶನ್‌ ಭಾಗವಾಗಿ, ಕೋವಿಡ್ ಮ್ಯಾನೇಜ್‌ಮೆಂಟ್ ಕರ್ತವ್ಯಗಳಲ್ಲಿ ವೈದ್ಯಕೀಯ ಇಂಟರ್ನಿಗಳನ್ನು ಅವರ ಅಧ್ಯಾಪಕರ ಮೇಲ್ವಿಚಾರಣೆಯಲ್ಲಿ ನಿಯೋಜಿಸಲು ಕೇಂದ್ರವು ನಿರ್ಧರಿಸಿದೆ.
ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳ ಸೇವೆಗಳನ್ನು ಟೆಲಿ-ಸಮಾಲೋಚನೆ ಮತ್ತು ಸೌಮ್ಯವಾದ ಕೋವಿಡ್ ಪ್ರಕರಣಗಳ ಮೇಲ್ವಿಚಾರಣೆಯಂತಹ ಸೇವೆಗಳನ್ನು ಒದಗಿಸಲು ಬಳಸಿಕೊಳ್ಳಬಹುದು. ಇದು ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ಅಸ್ತಿತ್ವದಲ್ಲಿರುವ ವೈದ್ಯರ ಕೆಲಸದ ಹೊರೆ ಕಡಿಮೆ ಮಾಡುತ್ತದೆ ಮತ್ತು ಚಿಕಿತ್ಸೆಯ ಪ್ರಯತ್ನಗಳಿಗೆ ಉತ್ತೇಜನ ನೀಡುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement