ಕೋವಿಡ್‌ ಉಲ್ಬಣ :ಜೆಇಇ ಮೇನ್‌ ಪರೀಕ್ಷೆ ಮುಂದೂಡಿಕೆ

ನವ ದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರು ಮಂಗಳವಾರ ಜಂಟಿ ಪ್ರವೇಶ ಪರೀಕ್ಷೆ- ಮುಖ್ಯ (ಜೆಇಇ ಮೇನ್) – ಮೇ 2021 ರ ಪರೀಕ್ಷೆ ಮುಂದೂಡಲಾಗಿದೆ ಎಂದು ಪ್ರಕಟಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಎನ್ ಟಿಎಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ,’ ಎಂದು ಪೊಖ್ರಿಯಾಲ್ ಟ್ವೀಟ್ ಮಾಡಿದ್ದಾರೆ.
ಪರೀಕ್ಷೆಗೆ ಪರಿಷ್ಕೃತ ದಿನಾಂಕಗಳು ಕನಿಷ್ಠ 15 ದಿನಗಳ ಮೊದಲು ತಿಳಿಸಲಾಗುತ್ತದೆ ಎಂದು ನೋಷನ್ ಟೆಸ್ಟಿಂಗ್ ಏಜೆನ್ಸಿ ಹೇಳಿದೆ.
ಈ ಹಿಂದೆ, ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಹೆಚ್ಚಳದಿಂದಾಗಿ ಜೆಇಇ- ಮುಖ್ಯ ಏಪ್ರಿಲ್ ಪರೀಕ್ಷೆ ಮುಂದೂಡಲಾಗಿತ್ತು.
ಮೊದಲ ಎರಡು ಸೆಷನ್ʼಗಳು ಈಗಾಗಲೇ ಫೆಬ್ರವರಿ ಮತ್ತು ಮಾರ್ಚ್ʼನಲ್ಲಿ ಪೂರ್ಣಗೊಂಡಿವೆ. ಪರೀಕ್ಷೆಗಳಿಗೆ ಸಂಬಂಧಿಸಿದ ಇತ್ತೀಚಿನ ನವೀಕರಣಗಳಿಗಾಗಿ ಅಧಿಕೃತ ಎನ್ ಟಿಎ ವೆಬ್ ಸೈಟ್ (www.nta.ac.in) ಮತ್ತು (https://jeemain.nta.nic.in/) ಗೆ ಭೇಟಿ ನೀಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement