ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ ಸಿಸಿಬಿ ತನಿಖೆಗೆ :ಪಂತ್‌

posted in: ರಾಜ್ಯ | 0

ಔಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರಿಗಾಗಿ ಮೀಸಲಿಟ್ಟ ಬೆಡ್ ಗಳ ಅಕ್ರಮ ಬುಕ್ಕಿಂಗ್ ದಂಧೆಯಲ್ಲಿ ಯಾರೇ ಭಾಗಿದಾರೂ ಕೂಡ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಈಗ ಈ ಹಗರಣವನ್ನು ಸಿಸಿಬಿ ತನಿಖೆ ನಡೆಸಲಿದೆ ಎಂಬ ಸುದ್ದಿ ಹೊರಬಿದ್ದಿದೆ.
ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಬಿಬಿಎಂಪಿ ಪೋರ್ಟಲ್ ಮೂಲಕ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕಾಯ್ದಿರಿಸುವ ವಿಧಾನದಲ್ಲಿ ಅಕ್ರಮ ಎಸಗಿದವರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದ್ದು, ಅಕ್ರಮದಲ್ಲಿ ಭಾಗಿಯಾದವರ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ. ಈ ಬಗ್ಗೆ ಸಿಸಿಬಿ ಸಮಗ್ರ ತನಿಖೆ ನಡೆಸಲಿದೆ ಎಂದು ಪಂತ್‌ ಹೇಳಿದ್ದಾರೆ.
ಈಗಾಗಲೇ ಬಿಎಂಪಿಯಿಂದ ಬೆಡ್ ಬುಕ್ಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ರೋಹಿತ್ ಹಾಗೂ ನೇತ್ರಾ ಎಂದು ಗುರುತಿಸಲಾಗಿದ್ದು, ಇವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿದ್ದ ಬಹುದೊಡ್ಡ ಬೆಡ್ ಬುಕ್ಕಿಂಗ್ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿಸುಬ್ರಮಣ್ಯ, ಸತೀಶ್ ರೆಡ್ಡಿ ಇತರರು ಬಯಲಿಗೆಳೆದಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ