ಬೆಂಗಳೂರು, ಅಫ್ಜಲಪುರದಲ್ಲಿ ಕೋವಿಡ್‌ ರೋಗಿಗಳ ಸಾವು: ಆಮ್ಲಜನಕ ಕೊರತೆ ಕೂಗು

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ದುರಂತ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಆಮ್ಲಜನಕದ ಕೊರತೆಯಿಂದ ಕೋವಿಡ್‌ ರೋಗಿಗಳು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಬೆಂಗಳೂರಿನ ಯಲಹಂಕದಲ್ಲಿರುವ ಆರ್ಕ್ ಆಸ್ಪತ್ರೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ, ಆಸ್ಪತ್ರೆ ಆಡಳಿತ ಮಂಡಳಿ, ಕೋವಿಡ್ ಸೋಂಕಿನಿಂದ ಮೃತ ಪಟ್ಟಿದ್ದಾರೆ ಎಂದು ಹೇಳಿದೆ.
ಆಸ್ಪತ್ರೆಯಲ್ಲಿ ಒಟ್ಟು 16 ಮಂದಿ ರೋಗಿಗಳಿದ್ದರು, ಆಮ್ಲಜನಕದ ಕೊರತೆಯಿಂದ ಇಬ್ಬರು ಮೃಪಟ್ಟಿದ್ದಾರೆ ಎಂದು ಹೇಳುತ್ತಿದ್ದಂತೆ ಸ್ಥಳೀಯ ಪೊಲೀಸ್‌ ಅಧಿಕಾರಿ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಮ್ಲಜನಕದ ಕೊರತೆ ಇರುವುದನ್ನು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.
ಅವರು ಕೂಡಲೇ ಬಾಲಿವುಡ್ ನಟ ಸೋನು ಸೂದ್ ಟ್ರಸ್ಟಿನ ಪದಾಧಿಕಾರಿಗಳನ್ನು ಸಂಪರ್ಕಿಸಿದ ನಂತರು ಅವರು ಸುಮಾರು 16ಕ್ಕೂ ಹೆಚ್ಚು ಸಿಲಿಂಡರ್‌ ಗಳನ್ನುಪೂರೈಕೆ ಮಾಡಿದ್ದು ಇದರಿಂದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ಹೇಳಲಾಗಿದೆ.
ಕಲಬುರ್ಗಿ ಜಿಲ್ಲೆಯ ಅಫ್ಜಲ್‍ಪುರ ತಾಲೂಕಿನಲ್ಲಿ ಆಮ್ಲಜನಕದ ಕೊರತೆಯಿಂದ ನಾಲ್ವರು ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಬೆಳಗಿನ ಜಾವ ನಾಲ್ಕು ಗಂಟೆಯಿಂದ ಆಮ್ಲಜನಕದ ಕೊರತೆ ಉಂಟಾಗಿತ್ತು. ಮಧ್ಯಾಹ್ನವಾದರೂ ಆಮ್ಲಜನಕ ಪೂರೈಕೆಯಾಗಲಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement