ಅಕ್ರಮ ಬೆಡ್ ಬುಕ್ಕಿಂಗ್ ದಂಧೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ:ಸಿಎಂ ಬಿಎಸ್‌ವೈ

ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರಿಗಾಗಿ ಮೀಸಲಿಟ್ಟ ಬೆಡ್ ಗಳ ಅಕ್ರಮ ಬುಕ್ಕಿಂಗ್ ದಂಧೆಯಲ್ಲಿ ಯಾರೇ ಭಾಗಿಯಾದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಂಸದ ತೇಜಸ್ವಿ ಸೂರ್ಯ ಅವರು ಈ ದಂಧೆಯನ್ನು ಬಯಲಿಗೆಳೆದಿದ್ದಾರೆ. ಅರ್ಧ ಗಂಟೆಯಲ್ಲಿ ಅವ್ಯವಹಾರದ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ , ನಗರದಲ್ಲಿ ಕೊರೊನಾ ಸೋಂಕಿತರಿಗಾಗಿ ಮೀಸಲಿಟ್ಟ ಬೆಡ್ ಗಳ ಅಕ್ರಮ ಬುಕ್ಕಿಂಗ್ ದಂಧೆಯಲ್ಲಿ ಯಾರೇ ಭಾಗಿಯಾದರೂ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಬಿಬಿಎಂಪಿಯಿಂದ ಬೆಡ್ ಬುಕ್ಕಿಂಗ್ ದಂಧೆ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರನ್ನು ರೋಹಿತ್ ಹಾಗೂ ನೇತ್ರಾ ಎಂದು ಗುರುತಿಸಲಾಗಿದ್ದು, ಇವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಬಿಬಿಎಂಪಿ ಅಧಿಕಾರಿಗಳಿಂದ ನಡೆಯುತ್ತಿದ್ದ ಬಹುದೊಡ್ಡ ಬೆಡ್ ಬುಕ್ಕಿಂಗ್ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿಸುಬ್ರಮಣ್ಯ, ಸತೀಶ್ ರೆಡ್ಡಿ ಇತರರು ಬಯಲಿಗೆಳೆದಿದ್ದಾರೆ. ಬಂಧಿತ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement