ಬೆಡ್ ಬ್ಲಾಕಿಂಗ್ ದಂಧೆ: ಇಬ್ಬರು ವೈದ್ಯರು ಸೇರಿ ಎಂಟು ಆರೋಪಿಗಳು ಸಿಸಿಬಿ ವಶಕ್ಕೆ

ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಬಿಬಿಎಂಪಿ ಕೋವಿಡ್ ವಾರ್ ರೂಮ್ ಉಸ್ತುವಾರಿಒಬ್ಬ ವೈದ್ಯ ಸೇರಿದಂತೆ 8 ಆರೋಪಿಗಳನ್ನು ಜಯನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಂಗಳವಾರ ರಾತ್ರಿಯೇ ವಾರ್ ರೂಮ್ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ.
ಆರೋಪಿಗಳು ಕೊರೊನಾ ಸೋಂಕಿತರಿಗೆ 3 ಬೆಡ್ ಕೊಡಿಸಿ 1.7 ಲಕ್ಷ ಹಣ ವಸೂಲಿ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲಿಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ