ಭಾರತದಲ್ಲಿ ಬುಧವಾರ 3.82 ಲಕ್ಷ ಕೊರೊನಾ ಹೊಸ ಸೋಂಕು ದಾಖಲು..3.7 ಸಾವಿರಕ್ಕೂ ಹೆಚ್ಚು ಸಾವು

ನವ ದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 3,82,315 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಒಂದೇ ದಿನ 3,780 ಸೋಂಕಿತರು ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 3,38,439 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದಬಿಡುಗಡೆಯಾಗಿದ್ದಾರೆ.
ದೇಶದಲ್ಲಿ ಈವೆರೆಗೆ ಒಟ್ಟು 2,06,65,148 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 2,26,188 ಮಂದಿ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 34,87,229 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 1,69,51,731 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.
ಕೊರೊನಾ ಹರಡುವಿಕೆ ನಿಯಂತ್ರಣಕ್ಕಾಗಿ ಒಟ್ಟಾರೆ ದೇಶದಲ್ಲಿ ಈವರೆಗೆ 16,04,94,188 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನಾಳೆ ಫಿಲಿಪ್ಪೀನ್ಸ್‌ಗೆ ʼಬ್ರಹ್ಮೋಸ್ ಕ್ಷಿಪಣಿʼಗಳ ಮೊದಲ ಸೆಟ್ ನೀಡಲಿದೆ ಭಾರತ

ನಿಮ್ಮ ಕಾಮೆಂಟ್ ಬರೆಯಿರಿ

advertisement