ಕರ್ನಾಟಕದ ಪ್ರತಿ ತಾಲೂಕಿಗೊಂದು ಕೋವಿಡ್ ಕೇರ್ ಸೆಂಟರ್ ಆರಂಭಕ್ಕೆ ನಿರ್ಧಾರ

ಬೆಂಗಳೂರು: ರಾಜ್ಯದ ಪ್ರತಿ ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭ ಮಾಡಲು ಸೂಚನೆ ನೀಡಲಾಗಿದೆ.  ವಸತಿ ಶಾಲೆಯಲ್ಲಿ ತಾತ್ಕಾಲಿಕ ಕೇರ್ ಸೆಂಟರ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕೆಲಸ ಪ್ರಾರಂಭ ಮಾಡಿದ್ದೇವೆ. ನಾವು ವಾರ್ ರೂಂ ಸಭೆ ಮಾಡಿದ್ದೇವೆ. ವಾರ್ ರೂಂನಲ್ಲಿ ಕೆಲಸಕ್ಕೆ ಸೂಚನೆ ಕೊಟ್ಟಿದ್ದೇವೆ. ಕೊರೋನಾ ಪಾಸಿಟಿವ್ ಬಂದ ಶೇ. 5 ರಿಂದ10 ಜನರು ಸರಿಯಾಗಿ ರೆಸ್ಪಾನ್ಸ್ ಮಾಡುತ್ತಿಲ್ಲ. ಇದು ಸರ್ಕಾರಕ್ಕೆ ಸಮಸ್ಯೆ ಆಗುತ್ತಿದೆ.  ಜನರು ನಿರ್ಲಕ್ಷ್ಯ ಮಾಡಬಾರದು. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರೂ ಮಾಹಿತಿ ನೀಡಬೇಕು. ಕೆಲವರು ಸ್ಯಾಂಪಲ್ ಕಲೆಕ್ಷನ್ ಸಮಯದಲ್ಲಿ ಸಂಪೂರ್ಣ ‌ಮಾಹಿತಿ ಕೊಡುತ್ತಿಲ್ಲ. ಇದರಿಂದ ಅವರನ್ನು ಟ್ರ್ಯಾಕ್‌ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಂಪೂರ್ಣ ಮಾಹಿತಿ, ವಿಳಾಸ ನೀಡಬೇಕು ಎಂದು ಮನವಿ ಮಾಡಿದರು.
ಕೋವಿಡ್ ಎಂದು ಮನಸಿಗೆ ಅಂದುಕೊಂಡವರು ಮೊದಲು ಈ ಕೇರ್ ಸೆಂಟರ್ ಗೆ ಬರಬೇಕು.  ವೈದ್ಯರು ನಿರ್ಧಾರ ಮಾಡಿ ಅವರನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡುತ್ತಾರೆ. ಆಸ್ಪತ್ರೆಗೆ ಬೇಡವಾದವರನ್ನು ಕೋವಿಡ್ ಕೇರ್ ಸೆಂಟರ್ ನಲ್ಲಿ ನೋಡಿಕೊಳ್ಳುತ್ತೇವೆ. ಆಗ ಬೆಡ್ ಕೊರತೆ ನಿವಾರಣೆ ಆಗುತ್ತದೆ. ಹೆಚ್ಚು ಕೇಸ್ ಬರುತ್ತಿರುವ ಜಿಲ್ಲೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಗೆ ಮೊದಲು ದಾಖಲಾಗಬೇಕು. ಟೆಸ್ಟ್ ಮಾಡಿಸುವಾಗ ಜನ ಸಂಪೂರ್ಣ ‌ಮಾಹಿತಿ ಕೊಡಬೇಕು. ಪಾಸಿಟಿವ್ ಬಂದ ಕೂಡಲೇ ಮೊಬೈಲ್ ಸ್ವಿಚ್ಡ್ ಆಫ್ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಹೀಗಾಗಿ ಸಂಪೂರ್ಣ ಮಾಹಿತಿ ನೀಡಿ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಲ್ಯಾಬ್ ಗಳು ರಿಪೋರ್ಟ್ ಕೊಡುವುದನ್ನು ತಡ ಮಾಡುತ್ತಿವೆ. ಶೀಘ್ರವೇ ಲ್ಯಾಬುಗಳು ರಿಪೋರ್ಟ್ ಕೊಡಬೇಕು. ರಿಪೋರ್ಟ್ ತಡ ಆಗುತ್ತಿರುವುದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement