ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಗುರುವಾರ ರಾಜ್ಯಾದ್ಯಂತ 49058 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದೇ ಸಮಯದಲ್ಲಿ 328 ಜನ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1790104ಕ್ಕೆ ಏರಿಕೆಯಾಗಿದೆ ಹಾಗೂ ಒಟ್ಟು ಸಾವಿನ ಸಂಖ್ಯೆ 17212ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಗುರುವಾರ 23706 ಜನರಿಗೆ ಕೊರೊನಾ ತಗುಲಿದ್ದು, 139 ಮಂದಿ ಮೃತಪಟ್ಟಿದ್ದಾರೆ. ಮಹಾನಗರಿಯೊಂದರಲ್ಲೇ ಈವರೆಗೆ 887086 ಮಂದಿಗೆ ಕೊರೊನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 7145 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
ಗುರುವಾರ 18943 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 1255797 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ
.



ನಿಮ್ಮ ಕಾಮೆಂಟ್ ಬರೆಯಿರಿ