ಬೆಂಗಳೂರು: ಕರ್ನಾಟಕದ ಕೆಲ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂಬುದಾಗಿ ಹವಾಮಾನು ಇಲಾಖೆ ಮುನ್ಸೂಚನೆ ನೀಡಿದೆ.
ಕೇಂದ್ರ ಹವಾಮಾನ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.
ಮೇ 10ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಕರ್ನಾಟಕ, ,ಕೇರಳ, ಮಾಹೆ, ಲಕ್ಷದ್ವೀಪಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.


ನಿಮ್ಮ ಕಾಮೆಂಟ್ ಬರೆಯಿರಿ