ಬೆಂಗಳೂರು:ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಮುಗಿಲುಮುಟ್ಟಿದ್ದು ಶುಕ್ರವಾರ 592 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 48781 ಹೊಸ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1838885ಕ್ಕೆ ಏರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 17,804ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಬೆಂಗಳೂರು ನಗರದಲ್ಲಿ 21376 ಜನರಿಗೆ ಹೊಸ ಕೊರೊನಾ ಸೋಂಕು ತಗುಲಿದ್ದು, 346 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ 908462 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 7491 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
ಶುಕ್ರವಾರ ರಾಜ್ಯಾದ್ಯಂತ 28623 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಈವರೆಗೆ ಒಟ್ಟು 1284420 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 5,54,465 ಸಕ್ರೀಯ ಪ್ರಕರಣಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾವಾರು ಸೋಂಕಿತ ಸಂಖ್ಯೆ ಪಟ್ಟಿ:
ನಿಮ್ಮ ಕಾಮೆಂಟ್ ಬರೆಯಿರಿ