ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2ನೇ ಅಲೆ ಉಲ್ಬಣ ಮುಂದುವರಿದ್ದು, ಶನಿವಾರ ಸೋಂಕಿಗೆ 482 ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 47563 ಹೊಸ ಕೇಸ್ ಪತ್ತೆಯಾಗಿವೆ.
ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,86,448ಕ್ಕೆ ಏರಿಕೆಯಾಗಿದೆ, ಒಟ್ಟು ಸಾವಿನ ಸಂಖ್ಯೆ 18,286ಕ್ಕೆ ಏರಿಕೆಯಾಗಿದೆ.
ಶನಿವಾರ ಬೆಂಗಳೂರಿನಲ್ಲಿ 21534 ಜನರಿಗೆ ಕೊರೊನಾ ತಗುಲಿದ್ದು, 285 ಮಂದಿ ಮೃತಪಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 9,29,996 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 7776 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಯಲ್ಲಿ ರಾಜ್ಯಾದ್ಯಂತ 34881 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 1319301 ಜನರು ಕೊರೋನಾದಿಂದ ಗುಣಮುಖರಾಗಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ