ಭಾರತದಲ್ಲಿ 9 ಲಕ್ಷ ಕೋವಿಡ್‌ ಸೋಂಕಿತರು ಆಮ್ಲಜನಕ ಬೆಂಬಲದಲ್ಲಿ: ಕೇಂದ್ರ

ನವ ದೆಹಲಿ: ದೇಶಾದ್ಯಂತ 9 ಲಕ್ಷ ಕೊರೊನಾ ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ, 1.7 ಲಕ್ಷ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ ಎಂದು ಕೇಂದ್ರ ಸರ್ಕಾರ ಶನಿವಾರ ಮಾಹಿತಿ ನೀಡಿದೆ.
ದೇಶಾದ್ಯಂತ ಒಟ್ಟು 4,88,861 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 1,70,841 ಕೋವಿಡ್ ರೋಗಿಗಳು ವೆಂಟಿಲೇಟರ್‌ನಲ್ಲಿದ್ದಾರೆ ಹಾಗೂ 9,02,291 ಸೋಂಕಿತರು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಶನಿವಾರ ತಿಳಿಸಿದ್ದಾರೆ.
ವಿದೇಶಾಂಗ ಸಚಿವ ಎಸ್.ಜೈಶಂಕರ್, ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ, ಬಂದರು, ಹಡಗು ಮತ್ತು ಜಲಮಾರ್ಗ ಮತ್ತು ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ರಾಜ್ಯ ಸಚಿವರು, ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರೈ. ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಮತ್ತು ನೀತಿ ಆಯೋಗದ ಸದಸ್ಯ (ಆರೋಗ್ಯ) ವಿನೋದ್ ಕೆ ಪೌಲ್ ಸಭೆಯಲ್ಲಿ ಭಾಗವಹಿಸಿದ್ದರು.
ಸಾಂಕ್ರಾಮಿಕ ಪರಿಸ್ಥಿತಿ ಕುರಿತು ಸಚಿವರ ತಂಡ(ಜಿಒಎಂ)ದ 25ನೇ ವರ್ಚುವಲ್ ಸಭೆಯಲ್ಲಿ ಡಾ. ಹರ್ಷವರ್ಧನ್ ಅವರು, ದೇಶಾದ್ಯಂತ ಶೇ. 1.34 ರಷ್ಟು ಕೋವಿಡ್ ಸೋಂಕಿತರು ಐಸಿಯುನಲ್ಲಿದ್ದಾರೆ, ಶೇ.0.39 ರಷ್ಟು ಪ್ರಕರಣಗಳು ವೆಂಟಿಲೇಟರ್ ಮತ್ತು ಶೇ. 3.70 ಕೋವಿಡ್ ರೋಗಿಗಳು ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಕ್ಷಿಣ ಭಾರತದ ಜನಪ್ರಿಯ ನಟರಾದ ಅದಿತಿ ರಾವ್ ಹೈದರಿ-ಸಿದ್ಧಾರ್ಥ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement