ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಮುಗಿಲುಮುಟ್ಟಿದ್ದು ಭಾನುವಾರ 490 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 47930 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1934378 ಕ್ಕೆ ಏರಿಕೆಯಾಗಿದೆ ಹಾಗೂ ಒಟ್ಟು ಸಾವಿನ ಸಂಖ್ಯೆ 18776ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಭಾನುವಾರ 20897 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 281 ಜನರು ಈ ಸೊಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಲೂರಿನಲ್ಲಿಯೇ ಈವರೆಗೆ 950893 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 8057 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಭಾನುವಾರ ರಾಜ್ಯಾದ್ಯಂತ 31796 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಈವರೆಗೆ ಬಿಡುಗಡೆಯಾದವರ ಸಂಖ್ಯೆ ಒಟ್ಟು 1351097ಕ್ಕೆ ತಲುಪಿದೆ.
ನಿಮ್ಮ ಕಾಮೆಂಟ್ ಬರೆಯಿರಿ