ನಾಗ್ಪುರ: ವೈದ್ಯರ ಸೋಗಿನಲ್ಲಿ ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡಿದ ಹಣ್ಣಿನ ವ್ಯಾಪಾರಿಯ ಬಂಧನ

ನಾಗ್ಪುರ: ವೈದ್ಯರ ಸೋಗಿನಲ್ಲಿ ಕೊರೊನಾ ವೈರಸ್ ರೋಗಿಗಳಿಗೆ ಚಿಕಿತ್ಸೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಹಣ್ಣು ಮಾರಾಟಗಾರನನ್ನು ಬಂಧಿಸಲಾಗಿದೆ.
ನಾಗ್ಪುರದ ಕಾಮತಿ ಪ್ರದೇಶದ ಮೂಲದ ಚಂದನ್ ನರೇಶ್ ಚೌಧರಿ ಹಣ್ಣುಗಳು ಮತ್ತು ಐಸ್ ಕ್ರೀಮ್ ಮಾರಾಟ ಮಾಡುತ್ತಿದ್ದ. ನಂತರ ಅವರು ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡಲು ಪ್ರಾರಂಭಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.
ಚೌಧರಿ ಕಳೆದ ಐದು ವರ್ಷಗಳಿಂದ ಓಂ ನಾರಾಯಣ ವಿವಿಧೋದ್ದೇಶ ಸೊಸೈಟಿ ಎಂಬ ಚಾರಿಟಬಲ್ ಔಷಧಾಲಯವನ್ನು ನಡೆಸುತ್ತಿದ್ದ, ಅಲ್ಲಿ ಅವರು ರೋಗಿಗಳಿಗೆ ಆಯುರ್ವೇದ ಪ್ರಕೃತಿ ಚಿಕಿತ್ಸೆ ನೀಡುತ್ತಿದ್ದ.
ದೇಶದಲ್ಲಿ ನಡೆಯುತ್ತಿರುವ ಕೊರೊನಾ ವೈರಸ್ ಸಾಂಕ್ರಾಮಿಕ ಪರಿಸ್ಥಿತಿಯ ಲಾಭವನ್ನು ಪಡೆದುಕೊಂಡ ಈ ನಕಲಿ ವೈದ್ಯ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿರುವ ತಮ್ಮಔಷಧಾಲಯದಲ್ಲಿ ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರಾರಂಭಿಸಿದ.
ಆತನೊಂದಿಗೆ ಪರಿಚಯವಿರುವ ಯಾರೋ ಒಬ್ಬರು ಜಿಲ್ಲಾ ಪೊಲೀಸರಿಗೆ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.
ಮಾಹಿತಿ ಪಡೆದ ನಂತರ ಪೊಲೀಸರು ಚೌಧರಿಯ ಔಷಧಾಲಯದಲ್ಲಿ ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ. ಆತನ ಔಷಧಾಲಯದಿಂದ ಆಮ್ಲಜನಕ ಸಿಲಿಂಡರ್‌ಗಳು, ಸಿರಿಂಜುಗಳು ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚೌಧರಿಯನ್ನು ಮಹಾರಾಷ್ಟ್ರ ಪ್ರಾಕ್ಟೀಷನರ್ಸ್ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement