ಕೊರೊನಾ ವಿರುದ್ಧ ಹೋರಾಟಕ್ಕೆ ಮತ್ತೆ 100 ಕೋಟಿ ರೂ. ದೇಣಿಗೆ ನೀಡಿದ ಇನ್ಫೋಸಿಸ್ ಫೌಂಡೇಶನ್

ಬೆಂಗಳೂರು: ಕಳೆದ ವರ್ಷ ಕೊರೋನಾ ವಿರುದ್ಧ ಹೋರಾಟಕ್ಕೆ 100 ಕೋಟಿ ರೂ. ನೀಡಿದ್ದ ಇನ್ಫೋಸಿಸ್ ಫೌಂಡೇಶನ್ ಕೋವಿಡ್ ಎರಡನೇ ಅಲೆ ವಿರುದ್ಧದ ಹೋರಾಟಕ್ಕೆ ಈಗ ಮತ್ತೆ 100 ಕೋಟಿ ರೂಪಾಯಿ ದೇಣಿಗೆ ನೀಡಲಿದೆ.
. ಕೋವಿಡ್ ನಿಯಂತ್ರಣಕ್ಕೆ ವೆಂಟಿಲೇಟರ್, ಆಮ್ಲಜನಕ ಸಾಂದ್ರಕ ಪೂರೈಕೆ ಹಾಗೂ ಮೂಲಸೌಕರ್ಯ ಬಳಕೆಗೆ 100 ಕೋಟಿ ರೂಪಾಯಿ ಇನ್ಫೋಸಿಸ್‌ ಹೇಳಿದೆ ಎಂದು ಮನಿ ಕಂಟ್ರೋಲ್‌.ಕಾಮ್‌ ವರದಿ ಮಾಡಿದೆ . ಈ ಮೂಲಕ ಕೋವಿಡ್ ವಿರುದ್ಧದ ಭಾರತದ ಹೋರಾಟಕ್ಕೆ ಇಸ್ಫೋಸಿಸ್‌ ಫೌಂಡೇಶನ್‌ ಒಟ್ಟಾರೆ 200 ಕೋಟಿ ರು. ದೇಣಿಗೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಇಸ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ, ‘ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್‌ ಆಸ್ಪತ್ರೆ ಸ್ಥಾಪನೆಗೆ ನೆರವು ನೀಡಿದ್ದೆವು. ಈ ಆಸ್ಪತ್ರೆ ಇದೀಗ ಪರಿಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಕಳೆದ ವರ್ಷ 100 ಕೋಟಿ ರೂ. ಪೈಕಿ ಶೇ.50ರಷ್ಟುಹಣವನ್ನು ಪಿಎಂ ಕೇರ್ಸ್‌ಗೆ ನೀಡಿದ್ದೆವು. ಆದರೆ ಈ ಸಲ 100 ಕೋಟಿ ರೂ. ಅನ್ನು ಮೂಲಭೂತ ಸೌಕರ್ಯಗಳ ಪೂರೈಕೆಗಾಗಿ ಬಳಕೆ ಮಾಡಿಕೊಳ್ಳಲಾಗುತ್ತದೆ’ ಎಂದು ತಿಳಿಸಿದ್ದಾರೆ.
ಇನ್ಫೋಸಿಸ್ ಸಂಸ್ಥೆ ಇರುವ ಮಂಗಳೂರು, ಹೈದರಾಬಾದ್‌, ಪುಣೆ, ನಾಗ್ಪುರ, ತಿರುವನಂತಪುರ ಹಾಗೂ ದೆಹಲಿಯಲ್ಲೂ ಕೋವಿಡ್‌ ನಿಯಂತ್ರಣಕ್ಕೆ ಬಳಸಲಿದ್ದೇವೆ ಎಂದು ಇಸ್ಫೋಸಿಸ್‌ ಫೌಂಡೇಶನ್‌ ತಿಳಿಸಿದೆ.

ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement