ಮಹತ್ವದ ಸಭೆ.. ಕೊರೊನಾ ಮೂರನೇ ಅಲೆ ಎದುರಿಸಲು ಟಾಸ್ಕ್ ಫೋರ್ಸ್ ಸಮಿತಿ ರಚನೆಗೆ ಸಿಎಂ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಲ್ಲಿ ಕೋವಿಡ್ 19 ನಿಯಂತ್ರಣದ ಕುರಿತು ಸೋಮವಾರ ನಡೆದ ಮಹತ್ವದ ಸಭೆಯಲ್ಲಿ ಮೂರನೇ ಅಲೆ ಎದುರಿಸಲು ಈಗಲೇ ಸಿದ್ಧರಾಗಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕಟ್ಟಪ್ಪಣೆ ಮಾಡಿದರಲ್ಲದೆ ಅದಕ್ಕಾಗಿ ಟಾಸ್ಕ್‌ಪೋರ್ಸ್‌ ರಚನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಸಚಿವರುಗಳಿಗೆ ಹಾಗೂ ಹಿರಿಯ ಅಧಕಾರಿಗಳಿಗೆ ಈ ಸಂಬಂಧ ಕೆಲವು ಜವಾಬ್ದಾರಿಗಳನ್ನು ನೀಡಿದ್ದಾರೆ. ಸಭೆಯಲ್ಲಿ ಮುಖ್ಯವಾಗಿ ಈಗ ಎರಡನೇ ಅಲೆ ನಿಯಂತ್ರಣ ಹಾಗೂ ಮುಂದಿನ ದಿನಗಳಲ್ಲಿ ಮೂರನ ಅಲೆ ಕುರಿತು ಮೊದಲೇ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಸಭೆಯ ಮುಖ್ಯಾಂಶಗಳು..:
*ಕೊರೊನಾ 3 ನೇ ಅಲೆಗೆ ಈಗಲೇ ಸಿದ್ಧರಾಗಬೇಕು, ಅದಕ್ಕಾಗಿ ಟಾಸ್ಕ್ ಫೋರ್ಸ್ ಕಮಿಟಿ ರಚಿಸಲು ಸಿಎಂ ಬಿಎಸ್‌ವೈ ಸೂಚನೆ.
*ಲಾಕ್‌ಡೌನ್‌ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಬೇಕು. ಹಾಗೂ ಜನರು ಅನಗತ್ಯ ಓಡಾಡುವದನ್ನು ತಪ್ಪಿಸಬೇಕು.
* ಖಾಸಗಿ ಆಸ್ಪತ್ರೆಗಳ ಬೆಡ್ ಬಗ್ಗೆ ನಿಗಾ ಇಡಬೇಕು, ಆಮ್ಲಜನಕ, ರೆಮ್ಡೆಸಿವಿರ್ ಹಾಗೂ ಬೆಡ್ ಸೇರಿದಂತೆ ಇತರೆ ವಿಷಯಗಳಲ್ಲಿ ಅಕ್ರಮ ಉಂಟಾದರೆ ಕ್ರಮ ಕೈಗೊಳ್ಳಲು ಸೂಚನೆ
* ತುರ್ತು ಅಗತ್ಯವಿರುವ ರೋಗಿಗಳಿಗೆ ಬೆಡ್ ಹಂಚಿಕೆಗೆ ಕ್ರಮ ಕೈಗೊಳ್ಳುವುದು ಹಾಗೂ ರೆಮ್ಡೆಸಿವಿರ್ ಡ್ರಗ್ ಅಗತ್ಯಕ್ಕನುಗುಣವಾಗಿ ಪೂರೈಸಲು ಕ್ರಮ
* ಶಾಸಕರು ಹಾಗೂ ಉಸ್ತುವಾರಿ ಸಚಿವರು ತಮ್ಮ ತಮ್ಮ ಕ್ಷೇತ್ರ ಹಾಗೂ ಜಿಲ್ಲೆಯಲ್ಲಿ ವಾಸ್ತವ್ಯ ನಡೆಸಿ   ಕೊರೊನಾ ಪರಿಸ್ಥಿತಿ ಹತೋಟಿಗೆ ತರಬೇಕು.
* ವಾರ್ ರೂಮ್ ಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ಸೂಚನೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2ನೇ ಹಂತದ ಮತದಾನ : ಶ್ರೀಮಂತ ಅಭ್ಯರ್ಥಿ ₹ 622 ಕೋಟಿ ಒಡೆಯ, ಅತ್ಯಂತ ಬಡ ಅಭ್ಯರ್ಥಿ ಬಳಿ ಇರುವುದು ಕೇವಲ...

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, 14 ದಿನ ಲಾಕ್ ಡೌನ್ ಜಾರಿಗೆ ತಂದಿದೆ. ಕಳೆದ ಹತ್ತು ದಿನಗಳಿಂದ ಕರ್ಫ್ಯೂ ಜಾರಿಯಲ್ಲಿದ್ದಾಗಲೂ ರಾಜ್ಯದಲ್ಲಿ ಸೋಮವಾರ ಹೊಸದಾಗಿ 39,305 ಜನರಿಗೆ ಕೊರೋನಾ ಸೋಂಕು ತಗುಲಿದೆ. 596 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿಯೇ 374 ಜನರು ಮೃತಪಟ್ಟಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement