ಹತ್ಯೆ ಪ್ರಕರಣ: ಪರಾರಿಯಾದ ಒಲಿಂಪಿಕ್‌ ಕುಸ್ತಿಪಟು ಸುಶೀಲ್ ಕುಮಾರ್ ವಿರುದ್ಧ ಲುಕ್ ಔಟ್ ನೋಟಿಸ್..!

ನವ ದೆಹಲಿ: ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ವಿರುದ್ಧ ದೆಹಲಿ ಪೊಲೀಸರು ಸೋಮವಾರ ಲುಕ್- ಔಟ್-ನೋಟಿಸ್‌ (ಎಲ್‌ಒಸಿ) ಹೊರಡಿಸಿದ್ದು, ವಾಯವ್ಯ ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ 23 ವರ್ಷದ ಮಾಜಿ ಕಿರಿಯ ರಾಷ್ಟ್ರೀಯ ಚಾಂಪಿಯನ್ ಹತ್ಯೆ ಪ್ರಕರಣದಲ್ಲಿ ಆತನ ಹೆಸರು ದಾಖಲಾದ ನಂತರ ಪರಾರಿಯಾಗಿದ್ದಾನೆ.
ಕ್ರೀಡಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ನಡೆದ ಜಗಳದ ಸಮಯದಲ್ಲಿ ಸಾಗರ್ ಧಂಕಡ್ ಥಳಿಸಲಾಯಿತು. ನಂತರ ಆತ ಮೃತಪಟ್ಟಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶೀಲಕುಮಾರ್ ವಿರುದ್ಧ ಕೊಲೆ, ಅಪಹರಣ ಮತ್ತು ಕ್ರಿಮಿನಲ್ ಪಿತೂರಿಯ ಎಫ್ಐಆರ್ ದಾಖಲಿಸಲಾಗಿದೆ.
ಘಟನೆ ನಡೆದಾಗ ಸುಶೀಲ್ ಕುಮಾರ್ ಸ್ಥಳದಲ್ಲಿದ್ದರು ಎಂದು ಸಂತ್ರಸ್ತರು ಆರೋಪಿಸಿದ್ದಾರೆ. ಇತರ ಕುಸ್ತಿಪಟುಗಳ ಮುಂದೆ ಸುಶೀಲ್ ಮತ್ತು ಅವನ ಸಹಚರರು ಸಾಗರನನ್ನು ಮಾಡೆಲ್ ಟೌನ್‌ನಲ್ಲಿರುವ ಅವರ ಮನೆಯಿಂದ ಅಪಹರಿಸಿದ್ದಾರೆ ಎಂದು ಸಂತ್ರಸ್ತರು ಹೇಳಿದ್ದಾರೆ.
ಪಾರ್ಕಿಂಗ್ ಪ್ರದೇಶದಲ್ಲಿ ಕುಮಾರ್, ಅಜಯ್, ಪ್ರಿನ್ಸ್, ಸೋನು, ಸಾಗರ್, ಅಮಿತ್ ಮತ್ತು ಇತರರ ನಡುವೆ ಜಗಳ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಾದ ನಂತರ ಪೊಲೀಸರು ಈ ಸಂಬಂಧ ಮಾಡೆಲ್ ಟೌನ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪರಾಧದ ಸ್ಥಳ ಮತ್ತು ಎಲ್ಲ ಐದು ವಾಹನಗಳನ್ನು ಪರಿಶೀಲಿಸಲಾಯಿತು. ತಪಾಸಣೆಯ ಸಮಯದಲ್ಲಿ, ಒಂದು ಸ್ಕಾರ್ಪಿಯೋದಲ್ಲಿ ಐದು ಲೈವ್ ಕಾರ್ಟ್ರಿಜ್ಗಳೊಂದಿಗೆ ಒಂದು ಡಬಲ್ ಬ್ಯಾರೆಲ್ ಲೋಡ್ ಗನ್ ಕಂಡುಬಂದಿದೆ ಮತ್ತು ಎರಡು ಮರದ ತುಂಡುಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಐದು ವಾಹನಗಳು ಮತ್ತು ಅಪರಾಧದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಪರಾಧದ ಸ್ಥಳವನ್ನು ಎಫ್ಎಸ್ಎಲ್, ವಿಧಿವಿಜ್ಞಾನ ತಜ್ಞರು ಪರಿಶೀಲಿಸಿದ್ದಾರೆ” ಎಂದು ಹೆಚ್ಚುವರಿ ಪೊಲೀಸ್ ಪೊಲೀಸ್ ಆಯುಕ್ತ (ವಾಯುವ್ಯ) ಗುರುಕ್ಬಾಲ್ ಸಿಂಗ್ ಸಿಧು ಹೇಳಿದ್ದಾರೆ.
ತನಿಖೆಯ ಸಮಯದಲ್ಲಿ, ಸಿವಿಲ್ ಲೈನ್ಸ್‌ನ ಟ್ರಾಮಾ ಸೆಂಟರ್‌ನಿಂದ ಸಾಗರ್ ಸಾವು ಮತ್ತು ಸೋನುಗೆ ಗಾಯದ ಬಗ್ಗೆ ಮಾಹಿತಿ ದೊರೆತಿದ್ದು, ಈ ನಂತರ ಐಪಿಸಿಯ 302, 365, 120 ಬಿ ಸೆಕ್ಷನ್‌ಗಳನ್ನು ನೋಂದಾಯಿಸಲಾಗಿದೆ ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : "ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement