18 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಕೋವಿಡ್‌ ಲಸಿಕೆ: ಎಸ್‌ಎಂಎಸ್ ಸಂದೇಶ ಪಾಸ್ ಆಗಿ ಬಳಸಲು ಅವಕಾಶ

ಬೆಂಗಳೂರು: ಲಸಿಕೆ ಪಡೆಯಲು ಲಸಿಕಾ ಕೇಂದ್ರಕ್ಕೆ ತೆರಳುವ 18 ವರ್ಷ ಮೇಲ್ಪಟ್ಟವರ ಬಳಿ ಲಸಿಕೆ ಪಡೆಯುವ ಸಮಯ ನಿಗದಿಯಾಗಿರುವ ಎಸ್‌ಎಂಎಸ್ ಇರುವುಡು ಕಡ್ಡಾಯವಾಗಿದೆ. ಈ ಎಸ್‌ಎಂಎಸ್ ಪರಿಶೀಲಿಸಿದ ಬಳಿಕವಷ್ಟೇ ಪೊಲೀಸರು ಲಸಿಕಾ ಕೇಂದ್ರಕ್ಕೆ ತೆರಳಲು ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ.
ಸೋಮವಾರದಿಂದ ರಾಜ್ಯದಲ್ಲಿ ಸೆಮಿ ಲಾಕ್ಡೌನ್ ಜಾರಿಯಾಗಿದ್ದು, ಅನವಶ್ಯಕವಾಗಿ ಜನರು ವಾಹನಗಳಲ್ಲಿ ತಿರುಗಾಡುವಂತಿಲ್ಲ. ಆದರೆ, ಲಸಿಕಾ ಕೇಂದ್ರಗಳಿಗೆ ಹೋಗಿ ಲಸಿಕೆ ಪಡೆಯುವವರಿಗೂ ಈ ನಿಯಮ ಅಡ್ಡಿಯಾಗಬಾರದು. ಹೀಗಾಗಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ಆನ್’ಲೈನ್ ನಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ರಾಜ್ಯ ಸರ್ಕಾರ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ಕೇಂದ್ರಕ್ಕೆ ಹೋಗಲು ಆನ್’ಲೈನ್ ನಲ್ಲಿ ನೋಂದಣಿ ಮಾಡಿದ ನಂತರದ ಮೊಬೈಲ್‌ ಬರುವ ಲಸಿಕೆ ಪಡೆಯುವ ಸಮಯ ನಿಗದಿಯಾಗಿರುವ ಸಂದೇಶವನ್ನೇ ಪಾಸ್ ರೀತಿ ಬಳಸಲು ಅವಕಾಶ ನೀಡಿದೆ. ಈ ಸಂದೇಶವನ್ನು ಪೊಲೀಸರಿಗೆ ತೋರಿಸಿ ಲಸಿಕಾ ಕೇಂದ್ರಗಳಿಗೆ ತೆರಳಬಹುದಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement