ಭಾರತದಲ್ಲಿ ಕೊರೊನಾ ಸೋಂಕು ಮತ್ತಷ್ಟು ಕಡಿಮೆ…ದೈನಂದಿನ ಸೋಂಕಿಗಿಂತ ಡಿಸ್ಚಾರ್ಜ್‌ ಆದವರ ಸಂಖ್ಯೆಯೇ ಹೆಚ್ಚು..!

ನವ ದೆಹಲಿ: ಕೊರೋನಾ 2ನೇ ಅಲೆಯ ಆರ್ಭಟ ಮಂಗಳವಾರವೂ ಮತ್ತಷ್ಟು ತಗ್ಗಿದ್ದು, ಸತತ ಎರಡನೇ ದಿನ ನಾಲ್ಕು ಲಕ್ಷಕ್ಕಿಂತ ಕಡಿಮೆ ದೈನಂದಿನ ಪ್ರಕರಣ ದಾಖಲಾಗಿದೆ.
ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳಲ್ಲಿ ಭಾರತದಲ್ಲಿ 3,29,942 ಹೊಸ ಪ್ರಕರಣಗಳು ದಾಖಲಾಗಿವೆ. ಹಾಗೂ ಇದೇ ಅವಧಿಯಲ್ಲಿ 3876 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,29,92,517ಕ್ಕೆ ಏರಿಕೆಯಾಗಿದೆ ಹಾಗೂ ಮೃತಪಟ್ಟವರ ಸಂಖ್ಯೆ 2,49,992ಕ್ಕೆ ತಲುಪಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 37,15,221ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 3,56,082 ಮಂದಿ ಗುಣಮುಖರಾಗಿ ಆಸ್ಪತ್ತೆರಯಿಂದ ಬಿಡುಗಡೆಯಾಗಿದ್ದಾರೆ. ಚೇತರಿಸಿಕೊಂಡವರ ಒಟ್ಟು ಸಂಖ್ಯೆ 1,90,27,304ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ ದಿನ 18,50,110 ಜನರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದೆ ಹಾಗೂ ಒಟ್ಟು ಈವರೆಗೆ 30,56,00,187 ಜನರನ್ನು ಕೋವಿಡ್‌ ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೆ ಭಾರತದಲ್ಲಿ ಒಟ್ಟು 17,27,10,066 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ರಾಹುಲ್ ಗಾಂಧಿ ಸ್ಪರ್ಧೆಯ ಸಸ್ಪೆನ್ಸ್ ನಡುವೆ ಅಮೇಥಿಯಲ್ಲಿ ರಾರಾಜಿಸುತ್ತಿರುವ "ರಾಬರ್ಟ್ ವಾದ್ರಾ ಅಬ್ ಕಿ ಬಾರ್" ಪೋಸ್ಟರ್...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement