ಸಾರ್ವಜನಿಕರ ಮೇಲೆ ಪೊಲೀಸರಿಂದ ಅನಗತ್ಯ ಬಲಪ್ರಯೋಗ ಬೇಡ: ಹೈಕೋರ್ಟ್

ಬೆಂಗಳೂರು: ಸಾರ್ವಜನಿಕರ ಮೇಲೆ ಪೊಲೀಸರು ಅನಗತ್ಯ ಬಲಪ್ರಯೋಗ ಮಾಡುವುದು ಬೇಡ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅನೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠವು ಈ ಸೂಚನೆ ನೀಡಿದೆ.
ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಪೊಲೀಸರು ಸಾರ್ವಜನಿಕರ ಮೇಲೆ ಅನಗತ್ಯ ಬಲ ಪ್ರಯೋಗ ಮಾಡುತ್ತಿದ್ದಾರೆ. ಕೋವಿಡ್ ರೋಗಿಯೊಬ್ಬರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ಆಗ ಪ್ರತಿಕ್ರಿಯಿಸಿದ ಪೀಠ, ಅನಗತ್ಯವಾಗಿ ಬಲಪ್ರಯೋಗ ಮಾಡಬಾರದು ಎಂದು ಈ ಮದೊಲು ಹೈಕೋರ್ಟ್ ನಿರ್ದೇಶಿಸಿದೆಯಲ್ಲವೇ ಎಂದು ಪ್ರಶ್ನಿಸಿತು. ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ಇದಕ್ಕೆ ಉತ್ತರಿಸಿ ಬಲಪ್ರಯೋಗ ಮಾಡುತ್ತಿಲ್ಲ. ಕೋವಿಡ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಹಾಗೊಂದು ವೇಳೆ ಪೊಲೀಸರಿಂದ ಸಮಸ್ಯೆಯಾಗುತ್ತಿದ್ದರೆ, ಆ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು.
ಜನರು ಸಹ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸರ್ಕಾರಕ್ಕೆ ಅಗತ್ಯ ಸಹಕಾರ ಕೊಡಬೇಕು. ಅನಗತ್ಯವಾಗಿ ಬಲಪ್ರಯೋಗ ಮಾಡದಂತೆ ಪೊಲೀಸರಿಗೆ ನಿರ್ದೇಶಿಸಬೇಕು ಎಂದು ತಿಳಿಸಿದ್ದು ವಿಚಾರಣೆಯನ್ನು ಮೇ 13ಕ್ಕೆ ಮುಂದೂಡಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

2 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement