ಕರ್ನಾಟಕದಲ್ಲಿ ಬುಧವಾರ ಕೊರೊನಾದಿಂದ 517 ಜನರು ಸಾವು

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಮುಂದುವರೆದಿದ್ದು ಬುಧವಾರ ರಾಜ್ಯದಲ್ಲಿ 517 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39,998 ಹೊಸ ಕೊರೊನಾ ಸೋಂಕು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2053191ಕ್ಕೆ ಏರಿಕೆಯಾಗಿದೆ, ಒಟ್ಟು ಸಾವಿನ ಸಂಖ್ಯೆ ಒಟ್ಟು 20368 ಕ್ಕೆ ಏರಿದೆ.
ಬೆಂಗಳೂರಿನಲ್ಲಿ 16286 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 275 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಈವರೆಗೆ 999805 ಜನರಿಗೆ ಕೊರೊನಾ ಸೋಂಕು ತಗುಲಿದೆ. ಈವರೆಗೆ ಒಟ್ಟು 8964 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.
ಇದೇ ಸಮಯದಲ್ಲಿ ರಾಜ್ಯಾದ್ಯಂತ 34,752 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 1440621 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಜಿಲ್ಲಾವಾರು ವಿವರಗಳನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

12-05-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement