ಬೆಂಗಳೂರು : ರಾಜ್ಯದಲ್ಲಿ ಕೊರೊನಾಉಲ್ಬಣ ಮುಂದುವರಿದ ಮಧ್ಯೆಯೇ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ಕಾವೇರಿಯಲ್ಲಿ ಉಸ್ತುವಾರಿ ಸಚಿವರ ಸಭೆ ನಡೆಯಿತು.
ಸಭೆಯಲ್ಲಿ ಲಾಕ್ ಡೌನ್ ಕುರಿತಾದ ಕ್ರಮ, ಸಾರ್ವಜನಿಕರಿಗೆ ಸರ್ಕಾರದ ವತಿಯಿಂದ ನೀಡಬೇಕಾದ ಸೌಲಭ್ಯಕುರಿತು ಚರ್ಚೆ ನಡೆಯಿತು. ಅಧಿಕಾರಿಗಳು ಹಾಗೂ ಸಚಿವರಿಂದ ಕೆಲವು ಮಾಹಿತಿ ಪಡೆದಮುಖ್ಯಮಂತ್ರಿ ಯಡಿಯೂರಪ್ಪ ಕೆಲವುಮಹತ್ವದ ಸೂಚನೆಗಳನ್ನು ನೀಡಿದ್ದಾರೆ.
ಕರ್ನಾಟಕದ ಎಲ್ಲ ಜಿಲ್ಲೆಗಳ ಲಸಿಕೆಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ಇರಬೇಕು ಎಂದು ಸೂಚನೆ ನೀಡಿದ್ದಾರೆ. ಜೊತೆಗೆ ಸಂಬಂಧಪಟ್ಟ ಅಧಿಕಾರಿಗಳು
ಲಸಿಕೆ ಪೂರೈಕೆ ಮಾಡುವ ಕಂಪನಿಗಳ ಜೊತೆ ನಿರಂತರ ಸಂಪರ್ಕದಲ್ಲಿರಬೇಕು. ಲಸಿಕೆ ನೀಡವುದರಲ್ಲಿಯೂ ಎರಡನೇ ಡೋಸ್ ಪಡೆಯುವವರಿಗೆ ಆದ್ಯತೆ ನೀಡಬೇಕು. ಕೋವಿಡ್ ರೋಗಿಗಳಿಗೆ ಆಮ್ಲಜನಕದ ಕೊರತೆ ಕಂಡುಬರುವ ಮಾಹಿತಿ ಸಿಕ್ಕ ತಕ್ಷಣವೇ ಅದನ್ನು ಬಗೆಹರಿಸಬೇಕು. ವ್ಯಾಕ್ಸಿನ್ ಬಗ್ಗೆ ಇರುವ ಗೊಂದಲವನ್ನು ತಕ್ಷಣವೇ ನಿವಾರಿಸಬೇಕು ಹಾಗೂ ಜಿಲ್ಲೆಗಳಲ್ಲಿ ಆಮ್ಲಜನಕ ಪೂರೈಕೆ ಸರಪಳಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ