ಕೊರೊನಾ ಸೋಲಿಸಿದ 103 ವರ್ಷದ ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಎಚ್. ಎಸ್. ದೊರೆಸ್ವಾಮಿ

ಬೆಂಗಳೂರು: ಕರ್ನಾಟಕ ಮೂಲದ ಗಾಂಧಿವಾದಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಎಚ್. ಎಸ್. ದೊರೆಸ್ವಾಮಿ ಅವರು ಕೋವಿಡ್ -19 ವಿರುದ್ಧದ ಯುದ್ಧದಲ್ಲಿ ಜಯಗಳಿಸಿದ್ದಾರೆ ಮತ್ತು ಬುಧವಾರ ಬೆಳಿಗ್ಗೆ ಅವರನ್ನು ಬಿಡುಗಡೆ ಮಾಡಲಾಯಿತು.
ಅವರನ್ನು ಇತ್ತೀಚೆಗೆ ಬೆಂಗಳೂರಿನ ಶ್ರೀ ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಾಸ್ಕುಲರ್ ಸೈನ್ಸಸ್ ಅಂಡ್ ರಿಸರ್ಚ್ ಗೆ ಸೇರಿಸಲಾಯಿತು. ಅವರ ಆಪ್ತ ಕುಟುಂಬ ಸದಸ್ಯರ ಪ್ರಕಾರ, “ಅವರನ್ನು ಈಗ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ”.
ಅವರು ಐದು ದಿನಗಳ ಹಿಂದೆ ಕೋವಿಡ್ -19 ಗೆ ಸಂಬಂಧಿಸಿದ ರೋಗಲಕ್ಷಣಗಳು ಕಂಡುಬಂದಿತ್ತು. ಅವರಿಗೆ ಉಸಿರಾಟದ ತೊಂದರೆ ಇರುವುದರಿಂದ ಅವರು ಜಯದೇವ ಇನ್‌ಸ್ಟಿಟ್ಯೂಟ್‌ಗೆ ಪ್ರವೇಶ ಪಡೆದಿದ್ದರು.
ಪ್ರಖ್ಯಾತ ಹೃದ್ರೋಗ ತಜ್ಞ ಮತ್ತು ಜಯದೇವ ಇನ್ಸ್ಟಿಟ್ಯೂಟ್ನ ನಿರ್ದೇಶಕ ಡಾ. ಸಿ ಎನ್ ಮಂಜುನಾಥ್ ಅವರಿಗೆ ಚಿಕಿತ್ಸೆ ನೀಡಿದ್ದರು.
ಏಪ್ರಿಲ್ 10, 1918 ರಂದು ಬೆಂಗಳೂರಿನಲ್ಲಿ ಜನಿಸಿದ ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ, ಕ್ವಿಟ್ ಇಂಡಿಯಾ ಚಳುವಳಿ ಮತ್ತು ವಿನೋಬಾ ಭಾವೆ ಅವರ ಭೂದಾನ ಚಳವಳಿಯಲ್ಲಿ ಭಾಗವಹಿಸಿದ್ದರು. ಕರ್ನಾಟಕದ ನಾಗರಿಕ ಸಮಾಜ ಚಳುವಳಿಗಳಲ್ಲಿ ದಶಕಗಳಿಂದ ಪರಿಚಿತ ವ್ಯಕ್ತಿಯಾಗಿದ್ದಾರೆ.
ಬೆಂಗಳೂರಿನ ಶಾಲೆಯಲ್ಲಿ ಭೌತಶಾಸ್ತ್ರ ಮತ್ತು ಗಣಿತದ ಶಿಕ್ಷಕ ದೊರೆಸ್ವಾಮಿ ಜೂನ್ 1942 ರಲ್ಲಿ ಮಹಾತ್ಮ ಗಾಂಧಿಯವರ ಕರೆಯ ಮೇರೆಗೆ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ್ದರು.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement