ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದ್ವಿತೀಯ ಪಿಯು ಸಿಇಟಿ ಪರೀಕ್ಷೆಯನ್ನು ಮುಂದೂಡಿದೆ.
2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಲ್ಪಟ್ಟಿರುವುದರಿಂದ ಹಾಗೂ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಜುಲೈ 7 ಹಾಗೂ ಜುಲೈ 8 ರಂದು ನಡೆಸಲು ನಿಗದಿ ಪಡಿಸಲಾಗಿದ್ದ 2021ನೇ ಸಾಲಿನ ಪ್ರವೇಶ ಪರೀಕ್ಷೆಯನ್ನು ಮತ್ತು ಜುಲೈ 9ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪ್ರಸ್ತುತ ಸಿಇಟಿಯನ್ನು ಆಗಸ್ಟ್ 28 ಮತ್ತು ಆಗಸ್ಟ್ 29ರಂದು ಮತ್ತು ಕನ್ನಡ ಭಾಷಾ ಪರೀಕ್ಷೆಯನ್ನು ಆಗಸ್ಟ್ 30ರಂದು ನಡೆಸಲಾಗುವುದು ಹಾಗೂ ಸದ್ಯದಲ್ಲಿಯೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗುವುದು ಎಂದು ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗೆ https://cetonline.karnataka.gov.in/kea/ ವೆಬ್ ತಾಣಕ್ಕೆ ಭೇಟಿ ನೀಡಬಹುದು.
ವಿದ್ಯಾರ್ಥಿಗಳು ಕೋವಿಡ್ನಿಂದ ಸುರಕ್ಷಿತವಾಗಿರಿ ಮತ್ತೂ ಪಿಯುಸಿ ಮತ್ತು ಸಿಇಟಿ ಪರೀಕ್ಷೆಗೆ ಉತ್ತಮ ಸಿದ್ಧತೆ ಮಾಡಿಕೊಳ್ಳಿ ಎಂದು ಡಾ.ಅಶ್ವತ್ಥನಾರಾಯಣ ಹಾರೈಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ