ಹುಬ್ಬಳ್ಳಿ: ಜಾಗತಿಕ ಮಹಾಮಾರಿ ಕೋವಿಡ್ ಸೋಂಕಿಗೆ ಒಳಗಾಗಿ ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಾಗಿ ಈಗ ಗುಣಮುಖರಾಗಿರುವ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿ ಬಸವರಾಜ ಹೊರಟ್ಟಿ ಅವರು ಇದೀಗ ಗೃಹ ನಿಗಾವಣೆಯಲ್ಲಿದ್ದಾರೆ.
ಅವರ ನೆಚ್ಚಿನ ಜೀವಸೆಲೆಯಾಗಿರುವ ಹುಬ್ಬಳ್ಳಿ ತಾಲೂಕಿನ ವರೂರು ನಿಸರ್ಗ ತೋಟದ ಮನೆಯಲ್ಲಿರುವ ಬಸವರಾಜ ಹೊರಟ್ಟಿ ಅವರು ತಮ್ಮ ತೋಟದಲ್ಲಿ ಕೃಷಿ ಕಾರ್ಯ ಚಟುವಟಿಕೆಗಳಲ್ಲಿ ನಿರತರಾಗಿದ್ದಾರೆ. ಹೊಲದಲ್ಲಿ ಸ್ವತಃ ಟ್ರ್ಯಾಕ್ಟರ್ ಮೂಲಕ ಉಳಿಮೆ ಮಾಡುತ್ತ ಮುಂಗಾರು ಬಿತ್ತನೆಗೆ ಸಿದ್ಧತೆ ನಡೆಸುತ್ತಿದ್ದಾರೆ…!
ಮೊದಲಿನಿಂದಲೂ ಕೃಷಿ ಮತ್ತು ಹೈನುಗಾರಿಕೆ ಬಗ್ಗೆ ಅಪಾರ ಆಸಕ್ತಿ ಹೊಂದಿರುವ ಹೊರಟ್ಟಿಯವರು ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ತೋಟದಲ್ಲಿಯ ಕೃಷಿ ಪೂರಕ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಪಾಲ್ಗೊಂಡಿದ್ದಾರೆ.
ಇಂದಿನ ಕೋವಿಡ್ ಪರಿಸ್ಥಿತಿಯಲ್ಲಿ ಸೋಂಕಿಗೆ ತುತ್ತಾಗಿರುವ ಶಿಕ್ಷಕರೂ ಸೇರಿದಂತೆ ಹಲವಾರು ನಾಗರಿಕರಿಗೆ ಪೂರಕ ಚಿಕಿತ್ಸೆ ದೊರಕಿಸುವುದರ ಜೊತೆಗೆ ಸೋಂಕಿತರಲ್ಲಿ ಆತ್ಮವಿಶ್ವಾಸ ಹಾಗೂ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಈ ಲಾಕ್ಡೌನ್ ಸಮಯದಲ್ಲಿ ಕಚೇರಿ ಕೆಲಸದ ಬದಲಾಗಿ ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ