ಮಹತ್ವದ್ದು.. ಕರ್ನಾಟಕದಲ್ಲಿ 18ರಿಂದ 44 ವಯೋಮಿತಿ ವರೆಗಿನ ಕೋವಿಡ್‌ ಲಸಿಕೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು:ರಾಜ್ಯಕ್ಕೆ ಅಗತ್ಯವಿರುವಷ್ಟು ಲಸಿಕೆ ಇನ್ನೂ ಬಂದಿಲ್ಲವಾದ ಕಾರಣ 18ರಿಂದ 44 ವಯೋಮಿತಿಯವರಿಗೆ ಲಸಿಕೆ ಅಭಿಯಾನವನ್ನು ಮೇ 14ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಲಸಿಕೆಗಾಗಿ ಸಮಯ ನಿಗದಿ ಪಡಿಸಿಕೊಂಡವರೂ ಸೇರಿ 18-44ರ ವಯೋಮಾನದವರಿಗೆ ಲಸಿಕೆ ಹಾಕುವುದನ್ನು ಮೇ 14 ರಿಂದ ಮುಂದಿನ ಆದೇಶದವರೆಗೆ ನಿಲ್ಲಿಸಲು ತೀರ್ಮಾನಿಸಲಾಗಿದೆ. ಕರ್ನಾಟಕದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕಿನ ವಿರುದ್ಧದ ಲಸಿಕೆ ಪಡೆಯಲು ಜನರು ಸರದಿ ನಿಲ್ಲುತ್ತಿದ್ದಾರೆ. ಆದರೆ ಮೇ 14ರಿಂದ ಲಸಿಕೆ ಹಾಕುವ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ.
ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ಮಾಹಿತಿ ನೀಡಿದೆ. 18 ರಿಂದ 44 ವರ್ಷ ವಯೋಮಾನದವರ ಕೋವಿಡ್ ಲಸಿಕೆ ನೀಡುವುದನ್ನು ಮೇ 14ರಿಂದ ಮುಂದಿನ ಆದೇಶದ ತನಕ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದೆ.
ಜನರು ಈಗಾಗಲೇ ಲಸಿಕೆಗಾಗಿ ಸಮಯವನ್ನು ನಿಗದಿ ಮಾಡಿಕೊಂಡಿದ್ದರೂ ಸಹ ಲಸಿಕೆ ನೀಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ರಾಜ್ಯದಲ್ಲಿ ಈಗಿರುವ ಲಸಿಕೆ ದಾಸ್ತಾನನ್ನು 2ನೇ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳ ಲಸಿಕೆ ನೀಡಲು ಮಾತ್ರ ಬಳಸಲು ತೀರ್ಮಾನಿಸಲಾಗಿದೆ.
ಮೇ 7ರಿಂದ ರಾಜ್ಯ ಸರ್ಕಾರವು ಭಾರತ ಸರ್ಕಾರದಿಂದ 45+ ವಯೋಮಾನದವರ ಲಸಿಕೆ ನೀಡಲು ಹಂಚಿಕೆಯಾದ ಲಸಿಕೆಗಳನ್ನು 2ನೇ ಡೋಸ್ ಪಡೆಯಲು ಬಾಕಿ ಇರುವ ಫಲಾನುಭವಿಗಳಿಗೆ ಬಳಕೆ ಮಾಡಲಾಗುತ್ತದೆ.
ಈ ಆದೇಶ ಕೋವಿಡ್ ವ್ಯಾಕ್ಸಿನೇಶನ್‌ ನಡೆಸುತ್ತಿರುವ ಎಲ್ಲ ಸರ್ಕಾರಿ ಕೋವಿಡ್ ಕೇಂದ್ರಗಳಿಗೆ ಅನ್ವಯವಾಗುತ್ತದೆ ಎಂದು ಆರೋಗ್ಯ ಇಲಾಖೆ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement